ಹಾಸನ : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷರಾಗಿ ಹಾಸನ ಉರ್ದು ಪ್ರೌಢಶಾಲೆಯ ಸಹ ಶಿಕ್ಷಕ ಬಸವರಾಜು ಎಚ್. ಸಿ, ಹಾಸನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಮ್ಮಣ್ಣಗೌಡ ಕೆ.ಎನ್, ಹಾಸನ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಜಗನ್ನಾಥ್ ಜಿ.ಪಿ ಅವರನ್ನು ಸಂಘದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ರಾಜ್ಯ ಸರ್ಕಾರಿ ನೌಕರ ಸಂಘದ ಹಾಸನ ಶಾಖೆಗೆ ಹೊಸ ಕಾರ್ಯಾಧ್ಯಕ್ಷರ ಆಯ್ಕೆ - President of Hassan District Branch
ರಾಜ್ಯ ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷರಾಗಿ ಹಾಸನ ಉರ್ದು ಪ್ರೌಢಶಾಲೆಯ ಸಹ ಶಿಕ್ಷಕ ಬಸವರಾಜು ಎಚ್. ಸಿ, ಹಾಸನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ತಮ್ಮಣ್ಣಗೌಡ ಕೆ.ಎನ್, ಹಾಸನ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಯಾಗಿ ಜಗನ್ನಾಥ್ ಜಿ.ಪಿ ಅವರನ್ನು ಸಂಘದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಇನ್ನು ಮೆಳಗೋಡು ಸರ್ಕಾರಿ ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್ ಅವರನ್ನು ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿಯಾಗಿ ಮತ್ತು ಹಾಸನ ಪ.ದ.ಸ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆ ನೌಕರ ಸಂಘದ ಮನು ಯು.ಎ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಾಹನ ಚಾಲಕ ದೇವಾನಂದ ಡಿ.ಜಿ ಮತ್ತು ಹಾಸನ ಜಿಲ್ಲಾ ನ್ಯಾಯಾಂಗ ಇಲಾಖೆ ಪ.ದ.ಸ ನೌಕರರ ಟಿ. ರಾಜು ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ವೇಳೆ, ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಈ, ಪ್ರಧಾನ ಕಾರ್ಯದರ್ಶಿ ಸಿ.ಎಸ್ ಶಿವಸ್ವಾಮಿ, ಖಜಾಂಚಿ ಲಿಂಗರಾಜು ಪಿ.ಎಚ್ ಮತ್ತು ರಾಜ್ಯ ಪರಿಷತ್ ಸದಸ್ಯ ಪ್ರದೀಪ್ ಕುಮಾರ್ ಹಾಜರಿದ್ದರು.