ಹಾಸನ : ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಮಹಾತ್ಮಗಾಂಧಿ ವೃತ್ತದ ಸಮೀಪದ ಉದ್ಯಾನದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಭೂಮಿ ಪೂಜೆ ನೆರವೇರಿಸಿದರು.
ಶುದ್ಧ ನೀರಿನ ಘಟಕ ನಿರ್ಮಾಣಕ್ಕೆ ಭವಾನಿ ರೇವಣ್ಣ ಚಾಲನೆ - ಹೊಳೆಸರಸಿಪುರ ಶುದ್ಧ ನೀರಿನ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿದ ಭವಾನಿ ರೇವಣ್ಣ
ಹೊಳೆನರಸಿಪುರ ಪುರಸಭೆ ವ್ಯಾಪ್ತಿಯಲ್ಲಿ 8 ರಿಂದ 10 ಲಕ್ಷ ರೂಪಾಯಿ ವೆಚ್ಚದಲ್ಲಿ 12 ನೀರಿನ ಘಟಕಗಳನ್ನು ಸ್ಥಾಪಿಸುವ ಉದ್ದೇಶದಿಂದ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ವಿದ್ಯುಕ್ತ ಚಾಲನೆ ನೀಡಲಾಗಿದೆ.
ಪುರಸಭೆ ವ್ಯಾಪ್ತಿಯಲ್ಲಿ ₹8ರಿಂದ ₹10 ಲಕ್ಷ ರೂಪಾಯಿ ವೆಚ್ಚದಲ್ಲಿ 12 ನೀರಿನ ಘಟಕಗಳನ್ನು ಸ್ಥಾಪಿಸುವ ಉದ್ದೇಶದಿಂದ ಕಟ್ಟಡ ನಿರ್ಮಾಣಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಅಕಾಲಿಕ ಮಳೆಯಿಂದ ನೀರಿನಲ್ಲಿ ಶುದ್ಧತೆಯ ಕೊರತೆ ಹಾಗೂ ಇತರ ಕಾರಣಗಳಿಂದ ಜನರಲ್ಲಿ ಕಾಯಿಲೆಗಳು ಹೆಚ್ಚಾಗುತ್ತಿದೆ. ಆದ್ದರಿಂದ ಶುದ್ಧ ನೀರಿನ ಘಟಕಗಳ ಅವಶ್ಯಕತೆ ಇದೆ ಎಂದು ಭವಾನಿ ರೇವಣ್ಣ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಬಸವರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್, ಪರಿಸರ ಇಂಜಿನಿಯರ್ ಅಶ್ವಿನಿ, ಪುರಸಭೆ ಆರೋಗ್ಯಾಧಿಕಾರಿ ವಸಂತ್, ಪುರಸಭೆ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.