ಅರಕಲಗೂಡು:ಇಲ್ಲಿನ ರಾಮನಾಥಪುರದ ದೇವರಹಟ್ಟಿ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 70ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಅರಕಲಗೂಡು: ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ - ರಕ್ತದಾನ ಶಿಬಿರ
ಪ್ರಧಾನಿ ಮೋದಿ ದೇಶದ ಅಭಿವೃದ್ಧಿ ಜೊತೆಗೆ ಕೊರೊನಾ ಸಂದರ್ಭದಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದರು. ಹಾಗಾಗಿ ಅವರ ಜನ್ಮದಿನಕ್ಕೆ ಜನರ ಪರ ಕಾರ್ಯಗಳನ್ನು ವಿವಿಧೆಡೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಂಡೇಶ್ವರ್ ಹೇಳಿದರು.
ರಕ್ತದಾನ ಶಿಬಿರ
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಂಡೇಶ್ವರ್ ಕುಮಾರ್ ಮಾತನಾಡಿ, ಪ್ರಧಾನಿ ಮೋದಿ ದೇಶದ ಅಭಿವೃದ್ಧಿ ಜೊತೆಗೆ ಕೊರೊನಾ ಸಂದರ್ಭದಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದರು. ಹಾಗಾಗಿ ಅವರ ಜನ್ಮದಿನಕ್ಕೆ ಜನಪರ ಕಾರ್ಯಗಳನ್ನು ವಿವಿಧೆಡೆ ಹಮ್ಮಿಕೊಳ್ಳಲಾಗಿದೆ ಎಂದರು.
ಸರ್ಜಿಕಲ್ ಸ್ಟೈಕ್, ಸಿಎಎ ಕಾಯ್ದೆ ಜಾರಿ, ಅನೇಕ ದಶಕಗಳ ಕಾಲ ಕಗ್ಗಂಟಾಗಿದ್ದ ಅಯ್ಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಚಾಲನೆ, ಆಯುಷ್ಯಮಾನ್ ಭಾರತ ಯೋಜನೆಯನ್ನು ಜಾರಿಗೆ ತರುವ ಮೂಲಕ ಮೋದಿ ಬಡವರ ಅರೋಗ್ಯದ ರಕ್ಷಣೆಗೆ ನಿಂತ ಮಹನೀಯರು ಎಂದರು.
Last Updated : Sep 19, 2020, 9:16 PM IST