ಗದಗ :ಮಹಿಳೆಯೊಬ್ಬಳು ಬಾವಿಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಕಳಸಾಪುರ ವ್ಯಾಪ್ತಿಯ ಸಾಸ್ವಿಹಳ್ಳಿ ಫಾರ್ಮ್ನಲ್ಲಿ ಬುಧವಾರ ನಡೆದಿದೆ. ರುಬಿನಾ ದಾವಲ್ ಸಾಬ್ ಕಣವಿ (27) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಎಂದಿನಂತೆ ಮನೆಯಲ್ಲಿ ಎಲ್ಲರೂ ಕೆಲಸಕ್ಕೆ ಹೋಗಿದ್ದರು. ಅವರು ವಾಪಸ್ ಬಂದಾಗ ಬಾವಿಯಲ್ಲಿ ರುಬಿನಾ ಶವವಾಗಿ ಪತ್ತೆಯಾಗಿದ್ದಾರೆ. ಈ ಮೃತ ಮಹಿಳೆಯ ಮೂರು ವರ್ಷದ ಮಗು ಜಾವೇದ್ ಕಣವಿ ಕೂಡ ಕಾಣೆಯಾಗಿದ್ದಾನೆ ಎನ್ನಲಾಗುತ್ತಿದ್ದು, ಆತನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದೆ.
ರುಬಿನಾ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತ ರುಬಿನಾ ಇದೇ ತೋಟದಲ್ಲಿ ಕೆಲಸಕ್ಕಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ರುಬಿನಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇನ್ನು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಗದಗ ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಇಲ್ಲಿಯ ಜಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
ಮಂಗಳೂರು; ಫಾಜಿಲ್ ಸಹೋದರನ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ: ಸುರತ್ಕಲ್ನಲ್ಲಿ ಇತ್ತೀಚೆಗೆ ನಡೆದ ಸರಣಿ ಕೋಮು ಹತ್ಯೆಯಲ್ಲಿ ಹತನಾದ ಫಾಜಿಲ್ನ ಸಹೋದರನ ಕಾರಿಗೆ ಅಪರಿಚಿತ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಇದೇ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.