ಹಾಸನ:ಜೋಕಾಲಿ ಆಟವಾಡುವ ಸಮಯದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.
ಮನೋಜ್ (8) ಮೃತ ಬಾಲಕ. ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಕೃಷಿ ಕೆಲಸಕ್ಕೆಂದು ಪೋಷಕರು ಮಗನನ್ನು ಮನೆಯಲ್ಲಿ ಬಿಟ್ಟು ತೆರಳಿದ್ದರು. ಆಗ ಮನೆಯಲ್ಲಿ ಕಟ್ಟಿದ ಜೋಕಾಲಿ ಆಟವಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿಕೊಂಡಿದೆ.