ಹಾಸನ: ಆರ್ಥಿಕವಾಗಿ ಹಿಂದುಳಿದ ವರ್ಗವೆಂದು ಗುರುತಿಸಿರುವ 144 ಜಾತಿಗಳಿಗೆ ಶೇ 10 ರಷ್ಟು ಮೀಸಲಾತಿ ಕೊಡಬೇಕು ಎನ್ನುವ ಆದೇಶವನ್ನು ಕೇಂದ್ರ ಸರ್ಕಾರ ಈಗಾಗಲೇ ಹೊರಡಿಸಿದೆ. ಅದರಂತೆ ಬ್ರಾಹ್ಮಣ ಸಮುದಾಯಕ್ಕೆ ಸಲ್ಲಬೇಕಾಗಿರುವ ಸವಲತ್ತುಗಳನ್ನು ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕವಾದರೂ ಕೂಡಲೇ ಕೊಡಿಸಬೇಕು ಎಂದು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಕೆ.ಎನ್.ಛಾಯಾಪತಿ ಆಗ್ರಹಿಸಿದರು.
ಸುಗ್ರೀವಾಜ್ಞೆ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಸವಲತ್ತು ನೀಡಬೇಕು: ಕೆ.ಎನ್.ಛಾಯಾಪತಿ - 144 ಜಾತಿಗಳಿಗೆ ಶೇಕಡ 10 ರಷ್ಟು ಮೀಸಲಾತಿ
ಬ್ರಾಹ್ಮಣ ಸಮುದಾಯಕ್ಕೆ ಸಲ್ಲಬೇಕಾಗಿರುವ ಸವಲತ್ತುಗಳನ್ನು ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕವಾದರೂ ಕೂಡಲೇ ಕೊಡಿಸಬೇಕು ಎಂದು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಕೆ.ಎನ್.ಛಾಯಾಪತಿ ಆಗ್ರಹಿಸಿದರು.
![ಸುಗ್ರೀವಾಜ್ಞೆ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಸವಲತ್ತು ನೀಡಬೇಕು: ಕೆ.ಎನ್.ಛಾಯಾಪತಿ Brahmin community should be privileged by the ordinance](https://etvbharatimages.akamaized.net/etvbharat/prod-images/768-512-8319586-641-8319586-1596718317627.jpg)
ಸುಗ್ರೀವಾಜ್ಞೆ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಸವಲತ್ತು ನೀಡಬೇಕು: ಕೆ.ಎನ್. ಛಾಯಾಪತಿ ಆಗ್ರಹ
ಸುಗ್ರೀವಾಜ್ಞೆ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಸವಲತ್ತು ನೀಡಬೇಕು: ಕೆ.ಎನ್. ಛಾಯಾಪತಿ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಈ ಆದೇಶವನ್ನು ಮಧ್ಯಪ್ರದೇಶ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತಿತರ ರಾಜ್ಯಗಳಲ್ಲಿ ಈಗಾಗಲೇ ಜಾರಿಗೊಳಿಸಲಾಗಿದೆ. ಹೀಗಾಗಿ, ಕರ್ನಾಟಕದಲ್ಲೂ ಜಾರಿಗೊಳಿಸಬೇಕು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇನೋ ರಾಜ್ಯದಲ್ಲೂ ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೇ ಅದರ ಕರಡು ತಯಾರಾಗಿದ್ದು, ಸಂಪುಟ ಸಭೆಯಲ್ಲಿ ಮಂಡಿಸಲು ಸಿದ್ಧಪಡಿಸಲಾಗಿದೆ. ಈ ಕರಡಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಸೇರಿಸಿ ಸುಗ್ರೀವಾಜ್ಞೆ ಹೊರಡಿಸಬೇಕು. ಕೇಂದ್ರ ಸರ್ಕಾರದ ಆದೇಶದ ರೀತ್ಯಾ ಬ್ರಾಹ್ಮಣ ಸಮುದಾಯಕ್ಕೆ ಸಲ್ಲಬೇಕಾದ ಸವಲತ್ತುಗಳನ್ನು ಕೊಡಿಸಬೇಕು ಎಂದು ಒತ್ತಾಯಿಸಿದರು.
Last Updated : Aug 6, 2020, 8:15 PM IST