ಕರ್ನಾಟಕ

karnataka

ETV Bharat / state

'ಬಾಲ್ಯ ವಿವಾಹ, ಮಕ್ಕಳ ಕಳ್ಳ ಸಾಗಾಣಿಕೆ ತಡೆಗಟ್ಟಿದರೆ ಸುಭದ್ರ ಸಮಾಜ ನಿರ್ಮಾಣ ಸಾಧ್ಯ' - ಹಾಸನ ಸುದ್ದಿ

ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಬಾಲ್ಯವಿವಾಹ ನಿಷೇಧ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿಭಾಗೀಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಜಿಲ್ಲಾಧಿಕಾರಿ ಆರ್. ಗಿರೀಶ್,District Collector Girish
ಜಿಲ್ಲಾಧಿಕಾರಿ ಆರ್. ಗಿರೀಶ್

By

Published : Feb 7, 2020, 7:13 PM IST

ಹಾಸನ: ಬಾಲ್ಯ ವಿವಾಹ-ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಿದರೆ ಮಾತ್ರ ಸುಭದ್ರ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಬಾಲ್ಯವಿವಾಹ ನಿಷೇಧ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿಭಾಗೀಯ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣಿಗೆ 12 ಇಲ್ಲವೇ 15 ವರ್ಷಕ್ಕೆ ಈ ಹಿಂದೆ ಮದುವೆಯಾಗುತ್ತಿತ್ತು. ಈಗಲೂ ಅಲ್ಲಲ್ಲಿ ಇಂತಹ ಪ್ರಕರಣಗಳು ಕಂಡು ಬರುತ್ತಿವೆ. ಇದು ನಮ್ಮ ಸಮಾಜದಲ್ಲಿದ್ದ ಅನರಕ್ಷತೆ, ಅಜ್ಞಾನದಿಂದ ಬಾಲ್ಯ ವಿವಾಹ ವ್ಯವಸ್ಥೆಗೆ ಕಾರಣವಾಗಿರಬಹುದು ಎಂದರು.

ಜಿಲ್ಲಾಧಿಕಾರಿ ಆರ್. ಗಿರೀಶ್​

ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಿ, ತಿಳುವಳಿಕೆ ಮಾತನ್ನು ಹೇಳಿ ಬಾಲ್ಯ ವಿವಾಹ ನಡೆಯದಂತೆ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ABOUT THE AUTHOR

...view details