ಕರ್ನಾಟಕ

karnataka

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಇಳಿದ ಸಾರಿಗೆ ಬಸ್ - ಹೊಲಕ್ಕೆ ಇಳಿದ ಸಾರಿಗೆ ಬಸ್​ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ರಸ್ತೆಯಿಂದ ಜೋಳದ ಹೊಲದ ಗುಂಡಿಗೆ ಇಳಿದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ಬಳಿ ಜರುಗಿದೆ.

ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಇಳಿದ ಸಾರಿಗೆ ಬಸ್

By

Published : Nov 22, 2019, 8:13 PM IST

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ರಸ್ತೆಯಿಂದ ಜೋಳದ ಹೊಲದ ಗುಂಡಿಗೆ ಇಳಿದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ಬಳಿ ಜರುಗಿದೆ.

ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಇಳಿದ ಸಾರಿಗೆ ಬಸ್

ಹಾಸನದಿಂದ ಬೆಂಗಳೂರಿಗೆ ಹೊರಟಿದ್ದ ನಾನ್​ಸ್ಟಾಪ್ ಬಸ್ ಹೊಲಕ್ಕೆ ಇಳಿದಿದೆ. ಇಳಿಜಾರಿನಲ್ಲಿ ನ್ಯೂಟ್ರಲ್ ಗೇರ್​ನಲ್ಲಿ ಬಂದ ವೇಳೆ ಚಾಲಕನ ನಿಯಂತ್ರಣಕ್ಕೆ ಸಿಗದೇ ಬಸ್​ ಗುಂಡಿಗೆ ಇಳಿದಿದೆ ಎನ್ನಲಾಗಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚನ್ನರಾಯಪಟ್ಟಣ ಹಾಗೂ ಉದಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details