ಹಾಸನ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ... ಸವಾರ ಸಾವು - byke rider died in a car accident
ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ.
ಮೃತ ದಿನೇಶ್ (48) ಚಿಲ್ಕೂರ್ ಹೊಸಳ್ಳಿ ಗ್ರಾಮದವರಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯ ಅತೀವೇಗ ಮತ್ತು ಅಜಾಗರೂಕತೆಯಿಂದ ಇಂತಹದೊಂದು ಘಟನೆ ಸಂಭವಿಸಿದೆ ಎಂಬುದು ಸ್ಥಳೀಯರ ಆರೋಪ.
ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಹರಿಯಾಣ ಮೂಲದವರಾಗಿದ್ದು, ಹಾಸನದಿಂದ ಬೇಲೂರಿಗೆ ಪ್ರವಾಸಕ್ಕೆಂದು ಹೋಗುವಾಗ ಇಂತಹದೊಂದು ಅವಘಡ ಸಂಭವಿಸಿದೆ.ಇನ್ನು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.