ಹಾಸನ:ಜಿಲ್ಲೆಯ ಹೊಳೆಆಲೂರು ಬಳಿಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಹೊಳೆಆಲೂರು ಬಳಿ ಇಬ್ಬರು ಯುವಕರ ದುರ್ಮರಣ - kannada news
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಮುಖಾಮುಖಿ ಡಿಕ್ಕಿ
ಉಮೇಶ್ (23), ಹರೀಶ್ (22) ಮೃತ ಯುವಕರು. ಮೃತರನ್ನು ಸಿಗರನಹಳ್ಳಿ ನಿವಾಸಿಗಳೆಂದು ಗುರುತಿಸಲಾಗಿದ್ದು, ಹಾಸನದಿಂದ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ಇನ್ನು ಹರದನಹಳ್ಳಿಯ ಕಾರು ಚಾಲಕ ಅನಿಲ್ ಘಟನೆ ಸಂಭವಿಸಿದ ಬಳಿಕ ತಲೆಮರೆಸಿಕೊಂಡಿದ್ದು, ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.