ಕರ್ನಾಟಕ

karnataka

ETV Bharat / state

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ಪ್ರಧಾನಿಗೆ ಶಾಸಕ ಪ್ರೀತಂ ಗೌಡ ಧನ್ಯವಾದ - ಅರ್ಟಿಕಲ್​ 370

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದನ್ನು ಹಾಸನ ಶಾಸಕ ಪ್ರೀತಂ ಗೌಡ ಸ್ವಾಗತಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದರು.

Celebration across Hassan District

By

Published : Aug 6, 2019, 9:34 PM IST

ಹಾಸನ:ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಒದಗಿಸುವ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಶಾಸಕ ಪ್ರೀತಂ ಗೌಡ ಸ್ವಾಗತಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರವನ್ನು ದೇಶದ ಅವಿಭಾಜ್ಯ ಅಂಗವೆಂದು ಘೋಷಿಸಿರುವುದು ಭಾರತೀಯರಲ್ಲಿ ಸಂತಸ ತಂದಿದೆ ಎಂದರು.

ಕೇಂದ್ರದ ನಿರ್ಧಾರ ಸ್ವಾಗತಿಸಿದ ಹಾಸನ ಬಿಜೆಪಿ ಶಾಸಕ

ದೇಶದ ತೆರಿಗೆ ಹಣ ಜಮ್ಮು, ಕಾಶ್ಮೀರದ ಅಭಿವೃದ್ಧಿಗೂ ಬಳಕೆಯಾಗಲಿದೆ. ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್‌ ಶಾ ನೇತೃತ್ವದ ಸರ್ಕಾರ ದೃಢ ತೀರ್ಮಾನ ಕೈಗೊಂಡು ನುಡಿದಂತೆ ನಡೆದುಕೊಂಡಿದೆ ಎಂದು ಅಭಿನಂದನೆ ಸಲ್ಲಿಸಿದರು.

ಇನ್ನು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಆಚರಿಸಬೇಕು ಎಂದು ನಿರ್ಧರಿಸಲಾಗಿತ್ತಾದರೂ, ಮಳೆಯ ಅಡ್ಡಿಯಿಂದಾಗಿ ಕಾರ್ಯಕ್ರಮ ರದ್ದುಪಡಿಸಲಾಯಿತು ಎಂದು ಶಾಸಕ ತಿಳಿಸಿದರು.

ABOUT THE AUTHOR

...view details