ಹಾಸನ: ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದ್ದು, ಸಂವಿಧಾನ ನೀಡಿರುವ ಮೀಸಲಾತಿಯನ್ನು ರದ್ದುಗೊಳಿಸಲಿದ್ದಾರೆ ಎಂದು ಶಾಸಕ ಯು.ಟಿ.ಖಾದರ್ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ₹5 ಕೋಟಿಯಿಂದ ಪ್ರಾರಂಭವಾಗಿ ಲಕ್ಷಾಂತರ ಕೋಟಿ ರೂಪಾಯಿ ಬಂಡವಾಳ ಹೊಂದಿರುವ ಎಲ್ಐಸಿ, ಬಿಇಎಂಎಲ್, ಬಿಪಿಸಿಎಲ್ ಸೇರಿದಂತೆ ಸರ್ಕಾರದ ಸಂಸ್ಥೆಗಳನ್ನು ಖಾಸಗಿಯವರಿಗೆ ಒಪ್ಪಿಸುತ್ತಿರುವುದು ಯಾವ ದೇಶ ಪ್ರೇಮ ಎಂದು ಪ್ರಶ್ನಿಸಿದರು.
ದೇಶದ ಯುವ ಸಮೂಹಭಾವನಾತ್ಮಕ ವಿಚಾರದಿಂದ ಹೊಟ್ಟೆ ತುಂಬವುದಿಲ್ಲ ಎಂಬುದನ್ನು ಅರಿಯಬೇಕು. ಯುವಕರು, ವಿದ್ಯಾರ್ಥಿಗಳು ಇಂತಹ ವಿಚಾರಗಳ ವಿರುದ್ಧ ಬಲಿಷ್ಠ ಹೋರಾಟ ಕಟ್ಟಬೇಕು. ಇಲ್ಲವಾದರೆ ಭಾರತ ಬಲಿಷ್ಠ ರಾಷ್ಟ್ರವಾಗುವುದಿಲ್ಲ ಎಂದು ಹೇಳಿದರು.