ಕರ್ನಾಟಕ

karnataka

ETV Bharat / state

ಬೈಕ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ; ಶಿಕ್ಷಕ ಸಾವು - ಕಾರು ಬೈಕ್​ ಅಪಘಾತದಲ್ಲಿ ಶಿಕ್ಷಕ ಸಾವು

ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಅತಿ ವೇಗವಾಗಿ ಬಂದು ಬೈಕ್​​ಗೆ ಡಿಕ್ಕಿ ಹೊಡೆದಿದೆ. ಶಿಕ್ಷಕ ಗಂಗಾಧರ್​​ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಿಂಬದಿ ಕುಳಿತಿದ್ದ ಮಮತಾ ಅವರಿಗೆ ಗಂಭೀರ ಗಾಯಗಳಾಗಿವೆ.

channarayapattana-teacher-death-in-car-bike-accident
ಬೈಕ್​​ ಕಾರು ಅಪಘಾತ

By

Published : Feb 8, 2021, 7:59 PM IST

ಹಾಸನ : ಬೈಕ್​​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕರೊಬ್ಬರು ಸಾವಿಗೀಡಾಗಿದ್ದು ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಬೈಕ್​​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು

ಗಂಗಾಧರ್ (45) ಮೃತ ಶಿಕ್ಷಕ. ವಾರದ ಮೊದಲ ದಿನವಾದ ಇಂದು ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಮತ್ತು ಗಂಗಾಧರ್ ಶಾಲೆಗೆ ಭೇಟಿ ನೀಡಲು ತೆರಳುತ್ತಿದ್ದರು. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಅತಿ ವೇಗವಾಗಿ ಬಂದು ಬೈಕ್​​ಗೆ ಡಿಕ್ಕಿ ಹೊಡೆದಿದೆ. ಶಿಕ್ಷಕ ಗಂಗಾಧರ್​​ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಿಂಬದಿ ಕುಳಿತಿದ್ದ ಮಮತಾ ಅವರಿಗೆ ಗಂಭೀರ ಗಾಯಗಳಾಗಿವೆ.

ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್​ನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ABOUT THE AUTHOR

...view details