ಕರ್ನಾಟಕ

karnataka

ETV Bharat / state

ಅಯೂಬ್ ಖಾನ್ ಹೇಳಿಕೆ ಮನಸ್ಸಿಗೆ ನೋವುಂಟು ಮಾಡಿದೆ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ - ಅಯೂಬ್ ಖಾನ್ ಹೇಳಿಕೆ

ಶ್ರವಣಬೆಳಗೊಳದ ದಿಗಂಬರ ಜೈನ ಸಮಾಜ, ಮಹಿಳಾ ಸಮಾಜ, ಬ್ರಾಹ್ಮಣ ಸಮಾಜ, ವರ್ತಕರ ಸಂಘ, ರೈತ ಸಂಘ ಹಾಗೂ ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗುರುವಾರ ಮೌನ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಮುಖಂಡ ಅಯೂಬ್ ಖಾನ್ ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

By

Published : Feb 11, 2022, 8:24 AM IST

ಹಾಸನ (ಶ್ರವಣಬೆಳಗೊಳ):ಮೈಸೂರಿನ ನ್ಯೂ ಕಾಂಗ್ರೆಸ್ ಮುಖಂಡ ಅಯೂಬ್ ಖಾನ್ ಶ್ರವಣಬೆಳಗೊಳದ ಭಗವಾನ್ ಬಾಹುಬಲಿ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವುದು ನಮ್ಮ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಶ್ರವಣಬೆಳಗೊಳದ ದಿಗಂಬರ ಜೈನ ಸಮಾಜ, ಮಹಿಳಾ ಸಮಾಜ, ಬ್ರಾಹ್ಮಣ ಸಮಾಜ, ವರ್ತಕರ ಸಂಘ, ರೈತ ಸಂಘ ಹಾಗೂ ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗುರುವಾರ ಆಯೋಜಿಸಿದ್ದ ಮೌನ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ಸಂದೇಶವನ್ನು ಜಗತ್ತಿಗೆ ನೀಡುತ್ತಿರುವ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಮಾತುಗಳಿಂದ ಶ್ರವಣಬೆಳಗೊಳದ ಸಮಸ್ತ ಜನತೆಗೆ ಅಪಮಾನ ಮಾಡಿದಂತಾಗಿದೆ. ಆದ್ದರಿಂದ ಮೌನ ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ರೀತಿಯ ಘಟನೆಗಳು ಮುಂದೆ ನಡೆಯದಂತೆ ಗಮನಹರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.


ಶ್ರೀಕ್ಷೇತ್ರ ಸೋಂದಾ ಮಠದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಮಾತನಾಡಿ, ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯನ್ನು ಸಾರುತ್ತಿರುವ ಗೊಮ್ಮಟೇಶ್ವರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದು ಜೈನ ಸಮಾಜದವರಿಗೆ ನೋವುಂಟು ಮಾಡಿದೆ. ಇನ್ನು ಮುಂದೆ ಜೈನ ಸಮಾಜದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಶ್ರೀಜೈನ ಮಠದ ಆವರಣದಿಂದ ಸುಮಾರು 500ಕ್ಕೂ ಹೆಚ್ಚು ಮಂದಿ ಮೌನ ಮೆರವಣಿಗೆ ಹೊರಟು ನಾಡಕಚೇರಿಗೆ ತೆರಳಿ ಉಪತಹಶೀಲ್ದಾರ್ ನಂಜೇಗೌಡ ಹಾಗೂ ಪೊಲೀಸ್ ಉಪನಿರೀಕ್ಷಕ ಸ್ವಾಮಿಯವರಿಗೆ ದೂರು ಪತ್ರ ಸಲ್ಲಿಸಿದರು.

ABOUT THE AUTHOR

...view details