ಕರ್ನಾಟಕ

karnataka

By

Published : Aug 7, 2020, 10:03 PM IST

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಹಾಸನದಲ್ಲಿ ಸಿಐಟಿಯು​ ನೇತೃತ್ವದಲ್ಲಿ ಪ್ರತಿಭಟನೆ

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು, ರಾಷ್ಟ್ರೀಯ ಆರೋಗ್ಯ ಮಿಶನ್ (ಎನ್.ಎಚ್.ಎಂ) ಕಾರ್ಯಕರ್ತರು ಹಾಗೂ ಆರೋಗ್ಯ ಕ್ಷೇತ್ರದಲ್ಲಿರುವ ಇತರರು ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

CIT-led protests in Hassan fulfillment of various demands
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ, ಹಾಸನದಲ್ಲಿ ಸಿಐಟಿಯು​ ನೇತೃತ್ವದಲ್ಲಿ ಪ್ರತಿಭಟನೆ

ಹಾಸನ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು​ ಜಂಟಿ ಸಂಘಟನೆಗಳ ನೇತೃತ್ವದಲ್ಲಿ ಬಿಸಿಯೂಟ, ಆಶಾ ನೌಕರರು ಸೇರಿ ಜಿಲ್ಲಾ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ದೇಶದಲ್ಲಿರುವ ಕೇಂದ್ರ ಕಾರ್ಮಿಕ ಸಂಘಟನೆಗಳು ಯೋಜನಾ ಕಾರ್ಮಿಕರ ಅನೇಕ ವಿಷಯಗಳನ್ನು ಕೈಗೆತ್ತಿಕೊಂಡು ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಗಮನ ಸೆಳೆಯುತ್ತ ಬಂದಿವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು, ರಾಷ್ಟ್ರೀಯ ಆರೋಗ್ಯ ಮಿಶನ್ (ಎನ್.ಎಚ್.ಎಂ) ಕಾರ್ಯಕರ್ತರು ಹಾಗೂ ಆರೋಗ್ಯ ಕ್ಷೇತ್ರದಲ್ಲಿರುವ ಇತರರು ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ನಮ್ಮ ದೇಶದಲ್ಲಿ ಇವರಿಲ್ಲದಿದ್ದರೆ ಈ ಕಾಯಿಲೆಯು ಸಮುದಾಯದಲ್ಲಿ ಬಹುಬೇಗ ಪಸರಿಸುತ್ತಿತ್ತು. ಇಷ್ಟೆಲ್ಲದರ ನಡುವೆಯೂ, ತಳಮಟ್ಟದ ಕೆಲಸಗಾರರಾದ ಇವರಿಗೆ ಸುರಕ್ಷೆಯನ್ನು ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿರುವುದು ಮತ್ತು ಕೋವಿಡ್ ಕೆಲಸಗಾರರಿಗೆ ಜೀವರಕ್ಷಕ ಸುರಕ್ಷತಾ ಸಾಧನಗಳ ಕೊರತೆಯಿಂದಾಗಿ ಕೆಲವರು ಸಾಯುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದರು.

ಸುರಕ್ಷತಾ ಕ್ರಮಗಳನ್ನು ವಹಿಸಲು, ವಿಮೆ ಸೌಲಭ್ಯ ಒದಗಿಸಲು, ಅಪಾಯಕಾರಿ ಕೆಲಸಕ್ಕೆ ಪರಿಹಾರ ಭತ್ಯೆ ಇತ್ಯಾದಿ ನೀಡಬೇಕೆಂದು ಕೇಂದ್ರ ಕಾರ್ಮಿಕರ ಸಂಘಟನೆಗಳು ಪದೇಪದೇ ಹೋರಾಟಗಳನ್ನು ನಡೆಸಿ, ಮನವಿ ನೀಡಿ ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಮಂಡಿಸುತ್ತ ಬಂದಿವೆ. ಆದರೆ, ಭಾರತ ಸರ್ಕಾರವು ಇವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಲೆ ಇದೆ ಎಂದು ದೂರಿದರು.​

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಧ್ಯಾಹ್ನದ ಊಟ ಯೋಜನೆ, ರಾಷ್ಟ್ರೀಯ ಆರೋಗ್ಯ ಮಿಶನ್ ಯೋಜನೆ ಮುಂತಾದ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಸಾಕಷ್ಟು ಬಜೆಟ್ ಅನುದಾನದ ಹಂಚಿಕೆ ಮಾಡುವ ಜೊತೆಗೆ ಯೋಜನೆಗಳನ್ನು ಖಾಯಂ ಮಾಡಿ, 45 ಮತ್ತು 46 ನೇ ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನಗಳ ಶಿಫಾರಸ್ಸಿನಂತೆ ಯೋಜನಾ ಕಾರ್ಮಿಕರು ಎಂದು ಖಾಯಂ ಮಾಡಿ, ಪ್ರತಿ ತಿಂಗಳಿಗೆ 21000 ಸಾವಿರ ರೂ. ಕನಿಷ್ಟ ವೇತನ ಪಾವತಿಸಿ, ಮಾಸಿಕ ಪಿಂಚಣಿ 10,000 ರೂ. ನೀಡಬೇಕು. ಎಲ್ಲಾ ಯೋಜನಾ ಕಾರ್ಮಿಕರಿಗೂ ಇಎಸ್ಐ​ ಮತ್ತು ಪಿಎಫ್ ನೀಡಿ ಎಂದು ಮನವಿ ಮಾಡಿದರು.

ABOUT THE AUTHOR

...view details