ಹಾಸನ: ಕೋವಿಡ್‌ನಂತಹ ಕಠಿಣ ಪರಿಸ್ಥಿತಿಯಲ್ಲಿಯೂ 18 ವರ್ಷದ ಯುವಕನಂತೆ ಸಿಎಂ ಯಡಿಯೂರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ದಿನದ 24 ಗಂಟೆಗಳ ಕಾಲವೂ ಚುರುಕಾಗಿ ರಾಜ್ಯದ ಎಲ್ಲಾ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕುವ ಅವರು, ಕೊರೊನಾ ಸೋಂಕು ತಡೆಗಟ್ಟುವ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೊಗಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಸಚಿವರು, ಸಿಎಂ ಮಾತು ಕೊಟ್ಟಂತೆ ಎಲ್ಲರಿಗೂ ಮಂತ್ರಿಸ್ಥಾನ ನೀಡಿದ್ದಾರೆ. ಮುನಿರತ್ನಂ ಹಾಗೂ ಪ್ರತಾಪ್‌ಗೌಡ ಪಾಟೀಲ್ ವಿಚಾರವಾಗಿ ನ್ಯಾಯಾಲಯದಲ್ಲಿ ತೀರ್ಪು ಬಾಕಿ ಇದೆ. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಹಕರಿಸಿದ ಎಂ.ಟಿ.ಬಿ.ನಾಗರಾಜ್, ಎಚ್.ವಿಶ್ವನಾಥ್ ಹಾಗೂ ಶಂಕರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಎಲ್ಲಾ ಬಿಜೆಪಿ ಮುಖಂಡರ ಬಯಕೆಯಾಗಿದೆ ಎಂದು ಹೇಳಿದರು.