ಹಾಸನ:ಮೂರು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊರವಲಯದ ಭುವನಹಳ್ಳಿ ಗೇಟ್ ಬಳಿ ನಡೆದಿದೆ.
ಮೂರು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ - ಹಾಸನ ಕ್ರೈಂ ನ್ಯೂಸ್
ಮೂರು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊರವಲಯದ ಭುವನಹಳ್ಳಿ ಗೇಟ್ ಬಳಿ ನಡೆದಿದೆ.
![ಮೂರು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ hassan](https://etvbharatimages.akamaized.net/etvbharat/prod-images/768-512-5526882-thumbnail-3x2-vid.jpg)
ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ
ಹಾಸನದಲ್ಲಿ ಮೂರು ಬೈಕುಗಳ ನಡುವೆ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಗಗನ್ (19) ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಯುವಕ. ಒಬ್ಬರಿಗಿಂತ ಒಬ್ಬರು ದ್ವಿಚಕ್ರ ವಾಹನ ಓಡಿಸುವ ಧಾವಂತದಲ್ಲಿ ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೈಕ್ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನುಳಿದ ಮೂರು ಮಂದಿ ಯುವಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಇನ್ನು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹವನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸಂಬಂಧ ಜಿಲ್ಲೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.