ಕರ್ನಾಟಕ

karnataka

ETV Bharat / state

ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೇಗೌಡರ ವಿರುದ್ಧ ಬಿಜೆಪಿಯಿಂದ ಚುನಾವಣಾಧಿಕಾರಿಗಳಿಗೆ ದೂರು - undefined

ಮೋದಿ ಎನ್ನುವವರ ಕಪಾಲಕ್ಕೆ ಹೊಡೆಯಿರಿ ಎನ್ನುವ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಗೆ ಸಂಬಂಧಿಸಿ ಇಂದು ಬಿಜೆಪಿ ಚುನಾವಣಾಧಿಕಾರಿಗಳಿಗೆ ದೂರನ್ನು ನೀಡಿದೆ.

ಬಿಜೆಪಿಯಿಂದ ಚುನಾವಣಾಧಿಕಾರಿಗಳಿಗೆ ದೂರು

By

Published : Mar 25, 2019, 10:28 PM IST

ಹಾಸನ : ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮೋದಿ ಮೋದಿ ಎಂದು ಜೈಕಾರ ಹಾಕಿದವರ ಮೇಲೆ ಹಲ್ಲೆ ಮಾಡಿ ಎಂದು ಕರೆ ನೀಡಿರುವ ಅರಸೀಕೆರೆ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೇಗೌಡರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಿ ಜೈಲಿಗಟ್ಟಬೇಕೆಂದು ಜಿಲ್ಲಾ ಬಿಜೆಪಿ ವಕ್ತಾರ ಮತ್ತು ವಕೀಲ ಎನ್.ಡಿ. ಪ್ರಸಾದ್ ಆಗ್ರಹಿಸಿದ್ದಾರೆ.

ಅರಸೀಕೆರೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮೋದಿ ಎನ್ನುವವರ ಕಪಾಲಕ್ಕೆ ಹೊಡೆಯಿರಿ ಎನ್ನುವ ವಿಡಿಯೋ ರಾಷ್ಟ್ರಾದ್ಯಂತ ಸುದ್ದಿವಾಹಿನಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಯಿತು.

ಓರ್ವ ಪ್ರಜಾಪ್ರತಿನಿಧಿಯಾಗಿ ಚುನಾವಣೆಯ ನೀತಿಸಂಹಿತೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯ ಮಹತ್ವವನ್ನು ತಿಳಿದು ಗೌರವಯುತವಾಗಿ ನಡೆದುಕೊಳ್ಳಬೇಕಾದ ಜವಾಬ್ದಾರಿ ಇರುವ ಶಾಸಕ ತನ್ನ ಇತಿಮಿತಿಯನ್ನು ಮೀರಿ ಇಂತಹ ಗೂಂಡಾಗಿರಿಯ ಪ್ರಚೋದಾನಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಶಾಂತಿ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ಕಂಟಕ ಪ್ರಾಯವಾಗಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯಿಂದ ಚುನಾವಣಾಧಿಕಾರಿಗಳಿಗೆ ದೂರು

ಬಿಜೆಪಿ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವ್ಯವಸ್ಥಿತವಾಗಿ ಮುಗಿಸಲು ಮೈತ್ರಿಕೂಟ ಸಂಚು ಮಾಡಿಕೊಂಡಿದ್ದು, ಈಗಾಗಲೇ ಬಯಲಾಗಿರುವ ಸಂಗತಿಯಾಗಿದೆ. ಮೈತ್ರಿ ಸರ್ಕಾರ ಗೂಂಡಾಗಿರಿಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಿದೆ. ಅಲ್ಲದೇ ಮೇಲ್ಕಂಡ ಶಾಸಕರ ಗೂಂಡಾಗಿರಿ ಹೇಳಿಕೆ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಜೆಡಿಎಸ್ ಗೂಂಡಾ ವರ್ತನೆ ಬಗ್ಗೆ ಮತದಾರ ಬಂಧುಗಳು ಜಾಗೃತರಾಗಿರಬೇಕು ಎಂದರು.

ಈಗಾಗಲೇ ಚುನಾವಣಾ ನೀತಿ ಸಂಹಿತೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವ ಶಾಸಕರ ವಿರುದ್ಧ ಚುನಾವಣಾಧಿಕಾರಿಗಳು ಸುಮೋಟೋ ಪ್ರಕರಣವನ್ನು ದಾಖಲಿಸಬೇಕು. ಪೊಲೀಸ್ ಇಲಾಖೆ, ಈ ಬಗ್ಗೆ ಗಂಭೀರವಾಗಿ ಕ್ರಮಕೈಗೊಂಡು ಶಂಕಾಸ್ಪದ ಜೆಡಿಎಸ್ ಗೂಂಡಾಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಿ ಚುನಾವಣೆ ಶಾಂತಿಯುತವಾಗಿ ಹಾಗೂ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಿಭಾಯಿಸಬೇಕೆಂದು ಎನ್.ಡಿ ಪ್ರಸಾದ್ ಆಗ್ರಹಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details