ಹಾಸನ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಾಸನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ - ಸಿಎಎ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಸನದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಿಎಎ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಸಿಎಎ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನ ಎರಡೂ ಸದನಗಳಲ್ಲೂ ಪಾಸ್ ಆಗಿ, ಬಳಿಕ ರಾಷ್ಟ್ರಪತಿಗಳಿಂದ ಅಂಗೀಕಾರಗೊಂಡಿದೆ. ಆದರೆ ಇದು ಭಾರತೀಯ ಗಣತಂತ್ರದ ಪ್ರಜಾಸತ್ತಾತ್ಮಕ ಬುನಾದಿಯನ್ನು ನಾಶಪಡಿಸಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಯು.ಟಿ. ಖಾದರ್ ಅವರ ಮೇಲೆ ಹಾಕಲಾಗಿರುವ ಪ್ರಕರಣವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.