ಕರ್ನಾಟಕ

karnataka

ETV Bharat / state

ಇಂಧನ ಬೆಲೆ ಏರಿಕೆ ಖಂಡಿಸಿ ಹಾಸನದಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ - ಹಾಸನದಲ್ಲಿ ಕಾಂಗ್ರೆಸ್

ಕೊರೊನಾ ಬಿಕ್ಕಟ್ಟಿನ ಮಧ್ಯೆ ದಿನೇ ದಿನೆ ಏರುತ್ತಿರುವ ಇಂಧನ ಬೆಲೆಯಿಂದಾಗಿ ಸಾರ್ವಜನಿಕರ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್,​​ ಹಾಸನ ನಗರದಲ್ಲಿ ಇಂದು ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿತು.

Congress protests
ಹಾಸನದಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ

By

Published : Jun 29, 2020, 9:30 PM IST

ಹಾಸನ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೈಕಲ್ ಮತ್ತು ಎತ್ತಿನಗಾಡಿ ಮೂಲಕ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ​ ​

ನಗರದ ಜಿಲ್ಲಾ ಕಾಂಗ್ರೆಸ್ ಭವನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬಿ.ಎಂ.ರಸ್ತೆ, ಎನ್.ಆರ್. ವೃತ್ತದ ಮೂಲಕ ಜಿಲ್ಲಾ ಅಂಚೆ ಕಚೇರಿ ಮುಂದೆ ಬಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರವು ಊಹಿಸಲಾಗದ ತೆರಿಗೆ ವಿಧಿಸಿ ಸಾಮಾನ್ಯ ಜನರ ಮೇಲೆ ಬರೆ ಎಳೆದಿದೆ. ಹೊರ ದೇಶಗಳಲ್ಲಿ ಇರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರತದ ಬೆಲೆಗಳಿಗಿಂತ ಕಡಿಮೆ ಇದೆ. ಕೇಂದ್ರ ಸರ್ಕಾರ ಜನರ ರಕ್ತವನ್ನ ಹೀರುವ ರೀತಿಯಾಗಿ ಬೆಲೆ ಏರಿಕೆ ಮಾಡಿದೆ ಎಂದು ಕಿಡಿಕಾರಿದರು.

ಯಾವ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನಮ್ಮ ದೇಶಕ್ಕೆ ಬರುತ್ತಿದೆ, ಸುಂಕ ಎಷ್ಟು ವಿಧಿಸಲಾಗುತ್ತಿದೆ, ಯಾವ ಆಧಾರದಲ್ಲಿ ಹಾಕಲಾಗಿದೆ ಎಂದು ಪ್ರಶ್ನಿಸಿದ ಕಾರ್ಯಕರ್ತರು, ಕೊರೊನಾ ಹರಡಿರುವ ಈ ಸಮಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​​ಗೆ ವಿಪರೀತ ತೆರಿಗೆ ವಿಧಿಸಿ ದಿನೇ ದಿನೆ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ಜೀವನವನ್ನೇ ನಾಶ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details