ಕರ್ನಾಟಕ

karnataka

By

Published : Aug 19, 2020, 3:24 PM IST

ETV Bharat / state

ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಕೊರೊನಾ

ಕೊರೊನಾ ವಿರುದ್ಧ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ‌. ಸತೀಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಡಾ.ಸತೀಶ್ ಕುಮಾರ್
ಡಾ.ಸತೀಶ್ ಕುಮಾರ್

ಹಾಸನ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ‌. ಸತೀಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಕೊರೊನಾ ವಿರುದ್ಧ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದ ಡಾ. ಸತೀಶ್ ಕುಮಾರ್​​ಗೆ ನಿನ್ನೆ ಜ್ವರ ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಎಂದು ಬಂದಿದ್ದು, ಕೋವಿಡ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೇ ಡಿಹೆಚ್ಒ ಪ್ರಾಥಮಿಕ ಸಂಪರ್ಕಿತರ ಪರೀಕ್ಷೆಗೆ ಸೂಚನೆ ನೀಡಲಾಗಿದ್ದು, ಅವರ ಕಚೇರಿಯನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಿಬ್ಬಂದಿಗೂ ಪರೀಕ್ಷೆ ಮಾಡಿಸುವಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು 5,000 ಗಡಿ ತಲುಪಿರುವ ಸೋಂಕಿತರ ಸಂಖ್ಯೆ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ‌.

ABOUT THE AUTHOR

...view details