ಹಾಸನ/ ಅರಸೀಕೆರೆ: ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅರಸೀಕೆರೆ ಆಸ್ಪತ್ರೆಯಲ್ಲಿ ನಡೆದಿದೆ.
ಪ್ರಕಾಶ್ ನಾಯಕ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತಾಲೂಕಿನ ಕಾರೆಹಳ್ಳಿ ತಾಂಡದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಕಳೆದ 10 ದಿನಗಳಿಂದ ಅರಸೀಕೆರೆ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಪ್ರಕಾಶ್ ನಾಯಕ್ ಕೋವಿಡ್-19ಗೆ ಚಿಕಿತ್ಸೆ ಪಡೆಯುತ್ತಿದ್ದ. ಕೊರೊನಾದಿಂದಾಗಿ ಮಾನಸಿಕವಾಗಿ ನೊಂದಿದ್ದ ಪ್ರಕಾಶ್ ನಾಯಕ್ ಶೌಚಾಲಯಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ, ಅಲ್ಲಿಯೇ ತಾನು ತೆಗೆದುಕೊಂಡು ಹೋಗಿದ್ದ ಬಟ್ಟೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಓದಿ:ಮಂಡ್ಯ ಕುಟುಂಬಕ್ಕೆ ನೆರವಾಗುವಂತೆ ಡಿಕೆಶಿ ಮನವಿ.. ಅರ್ಧಗಂಟೆಯಲ್ಲಿ ಸ್ಪಂದಿಸಿದ ತೆಲಂಗಾಣ ಸಚಿವ