ಅರಕಲಗೂಡು: ಕೊಣನೂರು ಹೋಬಳಿಯ ಗೊಬ್ಬಳಿ ಕಾವಲು ಗ್ರಾಮದ ಕೊರೊನಾ ಸೋಂಕು ಇರುವ ವ್ಯಕ್ತಿ ಕೊಣನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಹೋಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ, ನರ್ಸ್ಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.
ಆರೋಗ್ಯ ಕೇಂದ್ರಕ್ಕೆ ಸೋಂಕಿತ ವ್ಯಕ್ತಿ ಭೇಟಿ: ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್ ಟೆಸ್ಟ್ - Arakalagud Corona infected person visit News
ಪಾಸಿಟಿವ್ ವ್ಯಕ್ತಿಯ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದಲ್ಲಿ ಇರುವವರನ್ನೂ ಸಹ ಕೋವಿಡ್ ಟೆಸ್ಟ್ಗೆ ಒಳಪಡಿಸಿ, ಅವರ ಗಂಟಲು ದ್ರವವನ್ನೂ ಸಹ ತೆಗೆದುಕೊಳ್ಳಲಾಗಿದೆ.
ಆಸ್ಪತ್ರೆಯ ಸಿಂಬಂದಿಗಳಿಗೆ ಕೋವಿಡ್ ಟೆಸ್ಟ್
ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವೈದ್ಯರು, ಸಿಬ್ಬಂದಿಯ ಗಂಟಲು ದ್ರವದ ಮಾದರಿ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪಾಸಿಟಿವ್ ವ್ಯಕ್ತಿಯ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದಲ್ಲಿ ಇರುವವರನ್ನೂ ಸಹ ಕೋವಿಡ್ ಟೆಸ್ಟ್ಗೆ ಒಳಪಡಿಸಿ, ಅವರ ಗಂಟಲು ದ್ರವದ ಮಾದರಿಗಳನ್ನೂ ಸಹ ತೆಗೆದುಕೊಳ್ಳಲಾಗಿದೆ.