ಹಾಸನ: ಜಿಲ್ಲೆಯಲ್ಲಿ ಇಂದು 12 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಒಟ್ಟು 198 ಆಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಹಾಸನದಲ್ಲಿ ಇಂದು 12 ಜನರಿಗೆ ಕೊರೊನಾ: ಸೋಂಕಿತರ ಸಂಖ್ಯೆ 198ಕ್ಕೆ ಏರಿಕೆ - ಹಾಸನ ಕೊರೊನಾ ಅಪ್ಡೇಟ್
ಮುಂಬೈನಿಂದ ಆಗಮಿಸಿದ ಮೂವರು ಮತ್ತು ಕ್ವಾರಂಟೈನ್ನಲ್ಲಿದ್ದ 9 ಜನ ಸೇರಿ ಹಾಸನ ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಮಾಹಿತಿ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ಪತ್ತೆಯಾದ ಪ್ರಕರಣಗಳ ಪೈಕಿ ಮೂವರು ಮುಂಬೈನಿಂದ ಬೆಂಗಳೂರು ಮೂಲಕ ಜಿಲ್ಲೆಗೆ ಬಂದಿವರಾಗಿದ್ದಾರೆ. ಉಳಿದ 9 ಪ್ರಕರಣಗಳು ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದವರದ್ದು. ಇವರನ್ನು ಎರಡನೇ ಬಾರಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಎಲ್ಲಾ ಹೊಸ ಪ್ರಕರಣಗಳು ಚನ್ನರಾಯಪಟ್ಟಣ ತಾಲೂಕಿನಲ್ಲಿ ಪತ್ತೆಯಾಗಿದ್ದು, ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಇದುವರೆಗೆ ಜಿಲ್ಲೆಯಲ್ಲಿ 100 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ 98 ಜನ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 199 ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, 202 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಿದರು.