ಹಾಸನ: 15 ದಿನದ ಹಿಂದೆ ಹಾಸನ ನಗರದ ಖಾಸಗಿ ನರ್ಸಿಂಗ್ ಕಾಲೇಜಿಗೆ ಓದಲು ಬಂದಿದ್ದ ಕೇರಳ ಮೂಲದ 21 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಮಾಹಿತಿ ಈ ವಿದ್ಯಾರ್ಥಿನಿಯರು ಕಳೆದ 15 ದಿನದ ಹಿಂದೆ ಹಾಸನ ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೇರಳದಿಂದ ಬಂದಿದ್ದರು. ಇದೀಗ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ವಿದ್ಯಾರ್ಥಿಗಳು ಕೆಆರ್ ಪುರಂನಲ್ಲಿನ ಖಾಸಗಿ ಪಿಜಿಯಲ್ಲಿದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಖಚಿತಪಡಿಸಿದ್ದಾರೆ.
ಇನ್ನು ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಈಗಾಗಲೇ ಖಾಸಗಿ ವಸತಿಗೃಹದಲ್ಲಿ ಕ್ವಾರಂಟೈನಲ್ಲಿ ಇಡಲಾಗಿದ್ದು, ಇದವರಲ್ಲಿ ಪರೀಕ್ಷೆ ನಡೆಸಿದಾಗ 21 ಜನರಿಗೆ ಸೋಂಕು ಇರುವುದು ಖಚಿತವಾಗಿದೆ. ಅಲ್ಲದೇ ಇವರ ಸಂಪರ್ಕದಲ್ಲಿದ್ದ ಸಿಬ್ಬಂದಿ, ವಿದ್ಯಾರ್ಥಿಗಳಿಗೂ ಕೊರೊನಾ ಪರೀಕ್ಷೆ ಮಾಡಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಲಾಗುತ್ತಿದೆ ಎಂದು ಸತೀಶ್ ಮಾಹಿತಿ ನೀಡಿದ್ದಾರೆ.
ಓದಿ: ಮಾಜಿ ಸಚಿವ ರೋಷನ್ ಬೇಗ್ ಆಪ್ತ, ಜಮೀರ್ ಸಹೋದರ ಮುಜಾಮಿಲ್ ಅಹಮದ್ ಖಾನ್ ಇಡಿ ವಶಕ್ಕೆ
ಹಾಸನ ನಗರದಲ್ಲಿ ದಿನನಿತ್ಯ ಕೊರೊನಾ ಪಾಸಿಟಿವ್ ಪ್ರಕರಣದ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇರಳ ಮೂಲದ 21 ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಮತ್ತಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.