ಹಾಸನ:ಮುಂಬೈನಿಂದ ಮರಳಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ 5 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 209ಕ್ಕೆ ಏರಿಕೆಯಾಗಿದೆ.
ಮುಂಬೈನಿಂದ ಹಾಸನಕ್ಕೆ ಮರಳಿದ 5 ಜನರಿಗೆ ಕೊರೊನಾ ಪಾಸಿಟಿವ್ - ಜಿಲ್ಲಾಧಿಕಾರಿ ಆರ್.ಗಿರೀಶ್
ಮುಂಬೈನಿಂದ ಮರಳಿದ್ದ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ 5 ಜನರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು,ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
2 ವರ್ಷದ ಹೆಣ್ಣು ಮಗು (ಪಿ-204), 42 ವರ್ಷದ ಪುರುಷ (ಪಿ-205), 50 ವರ್ಷದ ಪುರುಷ (ಪಿ-206) , 41 ವರ್ಷದ ಮಹಿಳೆ (ಪಿ-206) ಹಾಗೂ 15 ವರ್ಷದ ಬಾಲಕನಿಗೆ (ಪಿ-208) ಕೋವಿಡ್ -19 ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬೈನಿಂದ ಆಗಮಿಸಿದ್ದ ಈ 5 ಜನರನ್ನೂ ಗಡಿ ಭಾಗದಲ್ಲಿ ತಡೆದು, ನಂತರ ಗಂಟಲು ದ್ರವ ಮಾದರಿ ಪಡೆದು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಇಂದು ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 209 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು,124 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 85 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.