ಹಾಸನ: ಜಿಲ್ಲೆಯಲ್ಲಿಂದು ಬರೋಬ್ಬರಿ 501 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 12,000ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಆಲೂರು-24, ಅರಕಲಗೂಡು-30, ಅರಸೀಕೆರೆ-63, ಬೇಲೂರು-21, ಚನ್ನರಾಯಪಟ್ಟಣ-87, ಹಾಸನ-249, ಹೊಳೆನರಸೀಪುರ-11, ಸಕಲೇಶಪುರ-11, ಇತರೆ 5 ಮಂದಿ ಸೇರಿ ಒಟ್ಟು 501 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. 245 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದು, ಈವರೆಗೆ 8,730 ಮಂದಿ ಗುಣಮುಖರಾಗಿದ್ದಾರೆ. ಸದ್ಯ, 3,023 ಸಕ್ರಿಯ ಪ್ರಕರಣಗಳಿದ್ದು, 55 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.