ಅರಕಲಗೂಡು: ತಾಲೂಕಿನ ಹೆತ್ತಗೌಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕಾಂತಾಮಣಿ ಹಾಗೂ ತಾಲೂಕು ಆರೋಗ್ಯ ನಿರೀಕ್ಷಕ ಚಂದ್ರೇಗೌಡ, ಆಶಾ ಮೇಲ್ವಿಚಾರಕಿ ಕವಿತಾ ಭೇಟಿ ನೀಡಿ ಕೋವಿಡ್-19 ಮುಂಜಾಗ್ರತೆಗಾಗಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಕುರಿತು ಜಾಗೃತಿ - virus awareness in hassan
ಹಾಸನ ಜಿಲ್ಲೆ ಅರಕಲಗೂಡು ತಾಲೂಲಕಿನ ಹೆತ್ತಗೌಡನಹಳ್ಳಿಗೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಕೆಲ ಅಧಿಕಾರಿಗಳು ಭೇಟಿ ನೀಡಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಜಾಗೃತಿ
ಹೋಂ ಕ್ವಾರಂಟೈನ್ ಮಾಡಿರುವವರ ಅನುಸರಣೆ ಬಗ್ಗೆ ಹಾಗೂ ಜ್ವರ ಸಮೀಕ್ಷೆ ಮಾಡಿರುವುದರ ಬಗ್ಗೆ ವಿಚಾರಿಸಿ, ದಾಖಲಾತಿಗಳನ್ನು ಸಮರ್ಪಕವಾಗಿ ಇಡುವಂತೆ ತಿಳಿಸಿದರು.
ಕೋವಿಡ್-19 ಮುಂಜಾಗ್ರತಾ ಕ್ರಮಗಳಾದ ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲು ಹಾಗೂ ಆಸ್ಪತ್ರೆಯ ಸಿಬ್ಬಂದಿ ಕೋವಿಡ್-19 ತಡೆಯಲು ಶ್ರಮಿಸಬೇಕೆಂದು ತಿಳಿಸಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ದರ್ಶನ್ ಹಾಗೂ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಇದ್ದರು.