ಹಾಸನ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ವೈದ್ಯಕೀಯ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯಾದ್ಯಂತ ಎಚ್ಚರಿಕೆ ವಹಿಸಲಾಗಿದೆ.
ಕೊರೊನಾ ವೈರಸ್ ಭೀತಿ: ಹಾಸನದಲ್ಲಿ ವೈದ್ಯಕೀಯ ಪರೀಕ್ಷಾ ಕೇಂದ್ರಗಳು ಪ್ರಾರಂಭ
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ವೈದ್ಯಕೀಯ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯಾದ್ಯಂತ ಎಚ್ಚರಿಕೆ ವಹಿಸಲಾಗಿದೆ
ಪ್ರವಾಸಿ ತಾಣಗಳಾದ ಶ್ರವಣಬೆಳಗೂಳ, ಬೇಲೂರು, ಹಳೇಬೀಡು, ಗೊರೂರು ಹೇಮಾವತಿ ಜಲಾಶಯಕ್ಕೆ ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೊರೊನಾ ವೈರಸ್ ಹರಡದಂತೆ ಪ್ರವಾಸಿ ಸ್ಥಳಗಳಲ್ಲಿ ವೈದ್ಯಕೀಯ ತಪಾಸಣಾ ಕೇಂದ್ರ ತೆರೆಯಲಾಗಿದೆ. ವಿದೇಶದಿಂದ ವಾಪಸ್ ಆದ ಹಾಸನ ಜಿಲ್ಲೆಯ ಜನರಿಗೂ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, 29 ದಿನ ಮನೆಯಿಂದ ಹೊರಗೆ ಸಾರ್ವಜನಿಕ ಸ್ಥಳಗಳಿಗೆ ತೆರಳದಂತೆ ಸೂಚಿಸಿದೆ.
ಈಗಾಗಲೇ ವಿದ್ಯಾಭ್ಯಾಸಕ್ಕೆಂದು ಚೀನಾಕ್ಕೆ ತೆರಳಿದ್ದ ಓರ್ವ ಮತ್ತು ಆಸ್ಟ್ರೇಲಿಯಾಕ್ಕೆ ತೆರಳಿದ್ದ ಇಬ್ಬರು ಹಾಸನಕ್ಕೆ ವಾಪಸ್ಸಾಗಿದ್ದು, ಅವರಿಗೂ ಮನೆಯಿಂದ ಹೊರಗೆ ಬರದಂತೆ ಸೂಚಿಸಲಾಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲೂ ಕೂಡ ಎರಡು ಪ್ರತ್ಯೇಕ ವಾರ್ಡ್ ತೆರೆಯಲಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ವೈರಸ್ ಕುರಿತಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.