ಸಕಲೇಶಪುರ (ಹಾಸನ):ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದ ಸಮೀಪ ತಿರುಗಾಡಲು ಹೋಗಿದ್ದ ನವದಂಪತಿ ಆಕಸ್ಮಿಕವಾಗಿ ಹೇಮಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.
ನಿನ್ನೆ ಸಂಜೆ ಮಹಿಳೆಯ ಶವ ಪತ್ತೆಯಾಗಿತ್ತು. ಇಂದು ಮುಂಜಾನೆ ಈಜುಗಾರರ ಸಹಾಯದಿಂದ ಆಕೆಯ ಪತಿಯ ಶವವನ್ನ ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬೇಲೂರು ತಾಲೂಕು ಮುರಳ್ಳಿ ಗ್ರಾಮದ ಅರ್ಥೇಶ್ (27) ಹಾಗೂ ಹೆನ್ನಲಿ ಗ್ರಾಮದ ಕೃತಿಕಾ (23) ಕಳೆದ ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದರು. ಅರ್ಥೇಶ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಲಾಕ್ಡೌನ್ ಹಿನ್ನೆಲೆ ತನ್ನ ಸ್ವಗ್ರಾಮ ಬೇಲೂರು ತಾಲೂಕಿನ ಮುರಹಳ್ಳಿ ಗ್ರಾಮಕ್ಕೆ ಬಂದಿದ್ದ.