ಹಾಸನ: ಕೇಂದ್ರ ಸರ್ಕಾರದ ವೈಫಲ್ಯ ಮತ್ತು ‘ಜನ ವಿರೋಧಿ ನೀತಿ’ಗಳ ವಿರುದ್ಧ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಸಿಪಿಐ ಪ್ರತಿಭಟನೆ - ಸಿಪಿಐ (ಎಂ) ಪ್ರತಿಭಟನೆ
ಕೊರೊನಾ ದಾಳಿ ತಡೆಯುವಲ್ಲಿ ಪ್ರಧಾನಿ ಮೋದಿ ಅವರ ಸಾಧನೆಗೆ ವಿಶ್ವ ಮಾನ್ಯತೆ ದೊರೆತಿದೆ ಎಂದು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ದೇಶದಲ್ಲಿ ಕಾಣಿಸಿಕೊಂಡ 3 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳ ಪೈಕಿ 12 ಸಾವಿರ ಮಂದಿ ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವುದು ಮೋದಿ ಸರ್ಕಾರದ ಸಾಧನೆಯೆ? ಎಂದು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ವೇಳೆ ಪ್ರಶ್ನಿಸಿದರು.
![ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಸಿಪಿಐ ಪ್ರತಿಭಟನೆ CPI protest against central government](https://etvbharatimages.akamaized.net/etvbharat/prod-images/768-512-7664688-457-7664688-1592462074816.jpg)
ಪ್ರತಿಭಟನೆ
ಕೊರೊನಾ ದಾಳಿ ತಡೆಯುವಲ್ಲಿ ಪ್ರಧಾನಿ ಮೋದಿ ಅವರ ಸಾಧನೆಗೆ ವಿಶ್ವ ಮಾನ್ಯತೆ ದೊರೆತಿದೆ ಎಂದು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ದೇಶದಲ್ಲಿ ಕಾಣಿಸಿಕೊಂಡ 3 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳ ಪೈಕಿ 12 ಸಾವಿರ ಮಂದಿ ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವುದು ಮೋದಿ ಸರ್ಕಾರದ ಸಾಧನೆಯೇ? ಎಂದು ಪಕ್ಷದ ಕಾರ್ಯಕರ್ತರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
ಬೇಡಿಕೆಗಳು:
- ಕೊರೊನಾ ಸಂಕಷ್ಟ ಕಾಲದಲ್ಲಿ ಆದಾಯ ತೆರಿಗೆ ಮಿತಿಯಿಂದ ಹೊರಗಿರುವ ಕುಟುಂಬಗಳಿಗೆ ತಿಂಗಳಿಗೆ ₹ 7,500 ರಂತೆ ಆರು ತಿಂಗಳವರೆಗೆ ನಗದು ವರ್ಗಾವಣೆ ಮಾಡಬೇಕು.
- ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆ.ಜಿ.ಯಂತೆ 6 ತಿಂಗಳವರೆಗೆ ಉಚಿತ ದಿನಸಿ ವಿತರಿಸಬೇಕು.
- ಉದ್ಯೋಗ ಖಾತ್ರಿ ಅಡಿಯಲ್ಲಿ ಕನಿಷ್ಠ ವರ್ಷದಲ್ಲಿ 200 ದಿನಗಳ ಉದ್ಯೋಗ ನೀಡಬೇಕು. ನಗರದ ಬಡವರಿಗೂ ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಬೇಕು.
- ನಿರುದ್ಯೋಗಿಗಳಿಗೆ ತಕ್ಷಣವೇ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು. ರಾಷ್ಟ್ರೀಯ ಆಸ್ತಿಗಳ ಲೂಟಿಯನ್ನು, ಸಾರ್ವಜನಿಕ ವಲಯದ ಖಾಸಗೀಕರಣವನ್ನು ಮತ್ತು ಕಾರ್ಮಿಕ ಕಾನೂನುಗಳ ರದ್ಧತಿಯನ್ನು ನಿಲ್ಲಿಸಬೇಕು.
- ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳು, ವೆಂಟಿಲೇಟರ್ಸ್, ಅಗತ್ಯ ಔಷಧಿಗಳ ಕೊರತೆ ನೀಗಿಸಬೇಕು.