ಕರ್ನಾಟಕ

karnataka

ETV Bharat / state

ಒಳಮೀಸಲಾತಿ ಜಾರಿಗೆ ತರುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ - ಸದಾಶಿವ ವರದಿ ಜಾರಿ

ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಒಳಮೀಸಲಾತಿ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನ ತಿದ್ದುಪಡಿ ಮಾಡಲು ರಾಜ್ಯ ಮತ್ತು ಕೇಂದ್ರಗಳಿಗೆ ಮುಕ್ತ ಅವಕಾಶ ನೀಡಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ(ಎಂ.ಅಣ್ಣಯ್ಯ ಬಣ) ಆಗ್ರಹಿಸಿದೆ.

ಎಂ.ಜೆ ಸದಾಶಿವ ಆಯೋಗ
ಎಂ.ಜೆ ಸದಾಶಿವ ಆಯೋಗ

By

Published : Sep 23, 2020, 1:13 AM IST

ಸಕಲೇಶಪುರ:ನ್ಯಾಯಮೂರ್ತಿ ಎಂ.ಜೆ ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಮಂಡಿಸಿ ತಕ್ಷಣವೇ ಜಾರಿಗೆ ತರಲು ಮುಂದಾಗಬೇಕು ಎಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ(ಎಂ.ಅಣ್ಣಯ್ಯ ಬಣ) ಜಿಲ್ಲಾ ಸಂಚಾಲಕ ವಳಲಹಳ್ಳಿ ವಿರೇಶ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಒಳಮೀಸಲಾತಿ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನ ತಿದ್ದುಪಡಿ ಮಾಡಲು ರಾಜ್ಯ ಮತ್ತು ಕೇಂದ್ರಗಳಿಗೆ ಮುಕ್ತ ಅವಕಾಶ ನೀಡಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು. ಶೋಷಣೆಗೆ ಒಳಗಾಗಿರುವ ಮಾದಿಗ ಮತ್ತು ಛಲವಾಧಿ ಸಮುದಾಯಗಳು ಒಂದೆ ವೇದಿಕೆಯಲ್ಲಿ ಸೇರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸದಾಶಿವ ವರದಿ ಜಾರಿಗೆ ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು

ಸಂಘಟನೆಯ ತಾಲೂಕು ಸಂಚಾಲಕ ಮೋಹನ್ ಕುಮಾರ್ ಅಚ್ಚರಡಿ ಮಾತನಾಡಿ, ಕಳೆದ 20 ವರ್ಷಗಳಿಂದ ಎರಡು ಸಮುದಾಯಗಳು ಹೋರಾಟ ನಡೆಸುತ್ತಾ ಬಂದಿದ್ದರು ಸಹ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ಸದಾಶಿವ ಆಯೋಗದ ವರದಿಯು ಶೇ 15ರಷ್ಟು ಪರಿಶಿಷ್ಟರ ಮೀಸಲಾತಿಯಲ್ಲಿ ಮಾದಿಗರಿಗೆ ಶೇ 6ರಷ್ಟು, ಹೊಲೆಯ ಅಥವಾ ಛಲವಾದಿಗೆ ಶೇ 5ರಷ್ಟು, ಪರಿಶಿಷ್ಟರಾದ ಭೋವಿ, ಲಮಾಣಿ, ಕೊರಚ, ಕೊರಮ ಇವರಿಗೆ ಶೇ 3ರಷ್ಟು ಮತ್ತು ಪರಿಶಿಷ್ಟ ಜಾತಿಯ ಅಲೆಮಾರಿ ಇತ್ಯಾದಿಗಳಿಗೆ ಶೇ 1ರಷ್ಟು ಒಳ ಮೀಸಲಾತಿ ಕಲ್ಪಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಒಳಮೀಸಲಾತಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಹುದ್ದೆಗಳಿಗೆ ಮಾತ್ರ ಸೀಮಿತವಾಗಿದ್ದು, ರಾಜಕೀಯ ಕ್ಷೇತ್ರಕ್ಕೆ ಅನ್ವಯಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಇದನ್ನು ಜಾರಿಗೆ ತರಲು ಮುಂದಾಗಬೇಕು ಎಂದರು.

ABOUT THE AUTHOR

...view details