ಹಾಸನ:ಎಸ್ಸಿ ಮತ್ತು ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್) ಸಮಗ್ರ ತಿದ್ದುಪಡಿ ತರುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ - ಎಸ್ಸಿ ಮತ್ತು ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆ
ಎಸ್ಸಿ ಮತ್ತು ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್)ಗೆ ಸಮಗ್ರ ತಿದ್ದುಪಡಿ ತರುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹಾಸನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ರ್ಯಾಲಿ, ಎನ್ ಆರ್ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಸಾಗಿತು. ಭೂ ಪರಭಾರೆ ನಿಷೇಧ ಕಾಯ್ದೆಗೆ ಸಮಗ್ರ ತಿದ್ದುಪಡಿ ತರುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಕುರಿತು ಮಾತನಾಡಿದ ಆರ್‌ಪಿಐ ರಾಜ್ಯ ಘಟಕದ ಅಧ್ಯಕ್ಷ ವೆಂಕಟಸ್ವಾಮಿ, ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 15ರಷ್ಟು ಇರುವ ದಲಿತರು, ಬಲಾಢ್ಯರ ದರ್ಪ ದೌರ್ಜನ್ಯದ ಮೂಲಕ ಶಿಕ್ಷಣ, ಭೂಮಿ, ವಸತಿ, ಹೀಗೆ ಬಹುಮುಖ್ಯ ಸಂಪನ್ಮೂಲಗಳಿಂದ ವಂಚಿತರಾಗುತ್ತಿದ್ದಾರೆ. ಪಿಟಿಸಿಎಲ್‌ಗೆ ಸಮಗ್ರ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗಬೇಕು ಎಂದರು.