ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

‘ಸಂವಿಧಾನ ಉಳಿಸಿ ಮೀಸಲಾತಿ ರಕ್ಷಿಸಿ’ ಎಂಬ ರಾಜ್ಯಮಟ್ಟದ ಜನಾಂದೋಲನದ ಅಂಗವಾಗಿ ಹಾಸನದಲ್ಲೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

dalith community protest in hassan
ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

By

Published : Mar 4, 2020, 7:49 PM IST

ಹಾಸನ:‘ಸಂವಿಧಾನ ಉಳಿಸಿ ಮೀಸಲಾತಿ ರಕ್ಷಿಸಿ’ ಎಂಬ ರಾಜ್ಯಮಟ್ಟದ ಜನಾಂದೋಲನದ ಅಂಗವಾಗಿ ಹಾಸನದಲ್ಲೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ತಮಟೆ ವಾದ್ಯಗಳೊಂದಿಗೆ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕcಏರಿ ಆವರಣಕ್ಕೆ ಬಂದಿತು. ಮೀಸಲಾತಿ ಮೂಲಭೂತ ಹಕ್ಕಲ್ಲ. ರಾಜ್ಯ ಸರ್ಕಾರ ಮೀಸಲಾತಿ ನೀಡಲೇಬೇಕೆಂದಿಲ್ಲ. ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ನ್ಯಾಯಾಲಯ ನಿರ್ದೇಶನ ನೀಡಲು ಸಾಧ್ಯವಿಲ್ಲ. ಸರ್ಕಾರ ಮೀಸಲಾತಿ ನೀಡುವುದಿಲ್ಲ ಎಂದಾದರೆ ಪರಿಶಿಷ್ಟರ ಪ್ರಾತಿನಿಧ್ಯದ ಬಗೆಗಿನ ದತ್ತಾಂಶ ಸಂಗ್ರಹಿಸುವ ಅಗತ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವುದು, ನಿರಾಕರಿಸುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ರಾಜ್ಯ ಸರ್ಕಾರ ಈ ಕಾಯ್ದೆಗೆ ತಿದ್ದುಪಡಿ ತರಬೇಕು ಹಾಗೂ ಕೂಡಲೇ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಮೂಲಭೂತ ಹಕ್ಕಿಗಾಗಿ ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನ ಸಂವಿಧಾನ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಿ. ಪರಿಶಿಷ್ಟರ ಜಮೀನು ಉಳಿಸಲು ರಾಜ್ಯ ಸರ್ಕಾರ ಉಭಯ ಸದನಗಳಲ್ಲಿ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ರೂಪಿಸಿ ಮಂಡಿಸುವ ಮೂಲಕ ತಿದ್ದುಪಡಿ ಕಾಯ್ದೆ ತರುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ABOUT THE AUTHOR

...view details