ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಅಸಂಘಟಿತ ಕಾರ್ಮಿಕರ ದಿನ ಆಚರಣೆ

ಅಸಂಘಟಿತ ಕಾರ್ಮಿಕರು ಎಲೆಮರೆ ಕಾಯಿಯಂತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.​

Day celebration of unorganized workers in Hassan
ಹಾಸನದಲ್ಲಿ ಅಸಂಘಟಿತ ಕಾರ್ಮಿಕರ ದಿನ ಆಚರಣೆ

By

Published : Mar 1, 2020, 7:45 PM IST

ಹಾಸನ: ಅಸಂಘಟಿತ ಕಾರ್ಮಿಕರು ಎಲೆಮರೆ ಕಾಯಿಯಂತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.​ ನಗರದ ಅಂಬೇಡ್ಕರ್ ಭವನದಲ್ಲಿ ಅಸಂಘಟಿತ ಕಾರ್ಮಿಕರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಮಿಕ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,​ ಸಮಾಜದಲ್ಲಿ ಒಟ್ಟು ದೇಶೀಯ ಉತ್ಪಾದನೆ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಸೇವಾ ವಲಯ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಈ ವಲಯದಲ್ಲಿ ಸರ್ಕಾರದ​ ಸವಲತ್ತುಗಳನ್ನು ಪಡೆಯುತ್ತಿರುವ ಸಂಘಟಿತ ಕಾರ್ಮಿಕರ ಸಂಖ್ಯೆ ಅಸಂಘಟಿತ ಕಾರ್ಮಿಕರ ಸಂಖ್ಯೆಗೆ ಹೋಲಿಸಿದರೆ ತೀರ ಕಡಿಮೆ ಎಂದರು.

ಹಾಸನದಲ್ಲಿ ಅಸಂಘಟಿತ ಕಾರ್ಮಿಕರ ದಿನ ಆಚರಣೆ

ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ನೀಡುತ್ತಿರುವುದು ಹಾಗೂ ಅಸಂಘಟಿತ ನೌಕರರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದರು. ಕರ್ನಾಟಕ ಸರ್ಕಾರವು 2019ನೇ ಸಾಲಿನಲ್ಲಿ ಮಾರ್ಚ್ 1 ರಂದು ಅಸಂಘಟಿತ ಕಾರ್ಮಿಕರ ದಿನವನ್ನಾಗಿ ಆಚರಿಸುವಂತೆ ಆದೇಶ ನೀಡಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎರಡನೇ ಬಾರಿ ಅಸಂಘಟಿತ ಕಾರ್ಮಿಕರ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

For All Latest Updates

TAGGED:

ABOUT THE AUTHOR

...view details