ಹಾಸನ:ಚುನಾವಣೆ ಹೇಗೆ ಪ್ರಜಾಪ್ರಭುತ್ವದ ಅಡಿಪಾಯವೋ ಹಾಗೇ ಚುನಾವಣೆಗೆ ಮತದಾರರ ಪಟ್ಟಿ ಅಡಿಪಾಯ. ಯಾವುದೇ ಲೋಪಗಳಿಲ್ಲದಂತೆ ಗುಣಮಟ್ಟದ ಮತದಾರರ ಪಟ್ಟಿ ಸಿದ್ದಪಡಿಸಲು ಜಿಲ್ಲಾಧಿಕಾರಿ ಆರ್.ಗಿರೀಶ್ ಅಧಿಕಾರಿಗಳಿಗೆ ಕರೆ ನೀಡಿದರು.
ಗುಣಮಟ್ಟದ ಮತದಾರರ ಪಟ್ಟಿ ತಯಾರಿಕೆಗೆ ಡಿಸಿ ಆದೇಶ..
ಚುನಾವಣೆ ಸಂವಿಧಾನದ ಅವಿಭಾಜ್ಯ ಅಂಗ. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ತಪ್ಪುಗಳಿದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಿ ಸರಿಪಡಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿಂದು ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ಸಂವಿಧಾನದ ಅವಿಭಾಜ್ಯ ಅಂಗ. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ತಪ್ಪುಗಳಿದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಿ ಸರಿಪಡಿಸುವಂತೆ ಸೂಚಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸರಿಯಿದೆಯೇ ಎಂಬುದನ್ನು ಖಾತರಿಪಡಿಸುವುದು ಸಾಮಾಜಿಕ ಜವಾಬ್ದಾರಿಯಾಗಿದೆ. ಸೆಪ್ಟೆಂಬರ್ 1ರಿಂದ ಅಕ್ಟೋಬರ್ 15ರವರೆಗೆ ನಡೆಯುವ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020 ಸಂದರ್ಭದಲ್ಲಿ ಎಲ್ಲರೂ ಸಾಮಾಜಿಕ ಕಳಕಳಿಯಿಂದ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಹೇಶ್, ಉಪವಿಭಾಗಾಧಿಕಾರಿ ಹಾಗೂ ಪ್ರಭಾರಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜ್, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್‌ಗೌಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.