ಹಾಸನ: ಆರೋಗ್ಯಕರ ಭಾರತ ನಿರ್ಮಾಣಕ್ಕೆ ಪ್ರತಿ ಮಗುವಿಗೂ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯನ್ನು ಹೋಗಲಾಡಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಕರೆ ನೀಡಿದ್ದಾರೆ.
ಪೋಲಿಯೋ ಲಸಿಕೆ ಹಾಕಿಸಿ ಅಂಗವೈಕಲ್ಯ ಹೋಗಲಾಡಿಸಿ: ಹಾಸನ ಜಿಲ್ಲಾಧಿಕಾರಿ ಕರೆ - ಜಿಲ್ಲಾಧಿಕಾರಿ ಕರೆ ಆರ್.ಗಿರೀಶ್
ಹಾಸನ, ಆರೋಗ್ಯಕರ ಭಾರತ ನಿರ್ಮಾಣಕ್ಕೆ ಪ್ರತಿ ಮಗುವಿಗೂ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯನ್ನು ಹೋಗಲಾಡಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಕರೆ ನೀಡಿದರು.
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕರ ಆಸ್ಪತ್ರೆಯಲ್ಲಿ ನಡೆದ 2020ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಾಸನ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1.25 ಲಕ್ಷ ಇದ್ದು, ಆ ಎಲ್ಲಾ ಮಕ್ಕಳಿಗಾಗಿ 872 ಪಲ್ಸ್ ಪೋಲಿಯೋ ಲಸಿಕಾ ಬೂತ್‍ಗಳನ್ನು ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ರು.
ರೋಗ ನಿರೋಧಕ ಶಕ್ತಿ ಕುಂಠಿತವಾಗಿ, ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಮಕ್ಕಳು ಈ ಅಭಿಯಾನದಿಂದ ಹೊರಗುಳಿಯುವ ಸಂಭವವಿದೆ. ಹಾಗಾಗಿ ಅಭಿಯಾನದ ಮೊದಲನೇ ದಿನ ಬೂತ್ ಮಟ್ಟದಲ್ಲಿ ಅಂಗನವಾಡಿ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದ್ದು, ಉಳಿದ 2 ದಿನಗಳಲ್ಲಿ ಅಭಿಯಾನದಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆ-ಮನೆ ಭೇಟಿ ಮಾಡಿ ಪೋಲಿಯೋ ಲಸಿಕೆ ಹಾಕುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.