ಹಾಸನ:ಜಿಲ್ಲೆಯಲ್ಲಿ ಇದುವರೆಗೂ ಏಳು ಮಂದಿಗೆ ಬ್ಲಾಕ್ ಫಂಗಸ್(ಮ್ಯೂಕರ್ ಮೈಕೋಸಿಸ್) ಕಾಣಿಸಿಕೊಂಡಿದ್ದು, ಓರ್ವ ಬಲಿಯಾಗಿದ್ದಾನೆಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸ್ಪಷ್ಟಪಡಿಸಿದರು.
ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಭೆ ನಗರದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಹಾಸನದ ಕೊರೊನಾ ಸೋಂಕು ಹರಡುವಿಕೆ ಮತ್ತು ಬ್ಲಾಕ್ ಫಂಗಸ್ ವಿಚಾರವಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಹಾಸನ ಜಿಲ್ಲೆಯಲ್ಲಿ ಇದುವರೆಗೂ ಏಳು ಜನರಲ್ಲಿ ಬ್ಲಾಕ್ ಫಂಗಸ್ ಮತ್ತೆಯಾಗಿದ್ದು, ಚಿಕಿತ್ಸೆ ನೀಡುವಾಗ ಓರ್ವ ಬಲಿಯಾಗಿದ್ದಾನೆ. ಉಳಿದ 6 ಜನರಲ್ಲಿ ಐವರನ್ನು ನಿಗದಿತ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದರು.
ಇದನ್ನೂ ಓದಿ;ಸಂಕಷ್ಟದಲ್ಲಿದ್ದ ಕರ್ನಾಟಕ ಕಬಡ್ಡಿ ಆಟಗಾರ್ತಿ ತೇಜಸ್ವಿನಿಗೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಇನ್ನು ಕೊರೊನಾ ಸೋಂಕು ತಗುಲಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜಾಗೃತಿ ವಹಿಸಲಾಗಿದೆ. ಇನ್ನು ಆಕ್ಸಿಜನ್, ವೆಂಟಿಲೇಟರ್, ರೆಮ್ಡಿಸಿವಿರ್ ಮೆಡಿಸಿನ್, ಹಾಸಿಗೆ, ವೈದ್ಯರು, ಸಿಬ್ಬಂದಿ ಸೇರಿದಂತೆ ಹಲವಾರು ವಿಚಾರವಾಗಿ ಜಿಲ್ಲಾಧಿಕಾರಿಗಳಿಂದ ಮತ್ತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಯನ್ನು ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಸಭೆ ನಡೆದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್, ಡಿಎಸ್ಓ ಕೃಷ್ಣಮೂರ್ತಿ ಇತರರು ಪಾಲ್ಗೊಂಡಿದ್ದರು.