ಹಾಸನ:ನಗರದ ಹೊರವಲಯದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಹೊರವಲಯದ ಬಿಟ್ಟಗೌಡನಳ್ಳಿ ಗ್ರಾಮದ ಹೆಚ್.ಪಿ. ಪೆಟ್ರೋಲ್ ಬಂಕ್ ಹಿಂಭಾಗವಿರುವ ಹಳೆ ಬಾವಿ ಬಳಿ ನಿನ್ನೆ ಸಂಜೆ ಸುಮಾರು 35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದುಬಂದಿಲ್ಲ.