ಹಾಸನ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮೂಲದ ಜಗದೀಶ್ (42) ಕೊಲೆಯಾದ ವ್ಯಕ್ತಿ. ಅರಕಲಗೂಡು ತಾಲೂಕಿನ ಮಲ್ಲಾಪುರದ ಲಕ್ಕೂರು ಅರಣ್ಯ ಪ್ರದೇಶದ ಬಳಿ ಘಟನೆ ಜರುಗಿದೆ.
ಅರಕಲಗೂಡು: ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ - ಅರಕಲಗೂಡು ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ
ವ್ಯಕ್ತಿಯೊಬ್ಬನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಲಕ್ಕೂರು ಅರಣ್ಯವ್ಯಾಪ್ತಿಯಲ್ಲಿ ನಡೆದಿದೆ.
ವ್ಯಕ್ತಿಯ ಬರ್ಬರ ಹತ್ಯೆ
ಇನ್ನು ಘಟನಾ ಸ್ಥಳದಲ್ಲಿ ಆಪೆ ಆಟೋವೊಂದು ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.