ಹಾಸನ:ಲಾಕ್ಡೌನ್ದಿಂದ ಸಂಕಷ್ಟಕ್ಕೆ ಸಿಲುಕಿರುವ ವಿಕಲಚೇತನ ಮತ್ತು ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಪರಿಹಾರ ಧನ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಿಕಲಚೇತನ ಕ್ರೀಡಾಪಟುಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿ ಆರ್. ಗಿರೀಶ್ ರವರಿಗೆ ಮನವಿ ಸಲ್ಲಿಸಲಾಯಿತು.
ಮಹಾಮಾರಿ ಕೊರೊನಾ ಲಾಕ್ಡೌನ್ ಪರಿಣಾಮ ವಿಕಲಚೇತನ ಹಾಗೂ ಪ್ಯಾರಾಲಂಪಿಕ್ ಕ್ರೀಡಾಪಟುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ತರ ಸಾಧನೆಗೈದ ರಾಜ್ಯದ ಪ್ಯಾರಾಲಂಪಿಕ್ ಕ್ರೀಡಾಪಟುಗಳು ಇಂದಿಗೂ ಸಹ ಆರ್ಥಿಕವಾಗಿ ತೀರಾ ಹಿಂದುಳಿದ ಬಡ ಕುಟುಂಬದ ನಿರುದ್ಯೋಗಿ ವ್ಯಕ್ತಿಗಳಾಗಿಯೇ ಉಳಿದಿದ್ದಾರೆ. ಸರ್ಕಾರದ ವತಿಯಿಂದ ದೊರೆಯಬೇಕಾದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುತ್ತಾರೆ ಎಂದು ಸಂಘದ ಸದಸ್ಯರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.