ಹಾಸನ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಹಾಗೂ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಿ. ದೇವರಾಜ ಅರಸು ಅವರ 105ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇವರಾಜ ಅರಸು ಅವರು ಅನೇಕ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಹಿಂದುಳಿದ ವರ್ಗಗಳ, ಕುಟುಂಬಗಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಂತಹ ಆದರ್ಶಗಳನ್ನು ಪಾಲಿಸುವ ಮೂಲಕ ಅವರ ಕನಸನ್ನು ನನಸು ಮಾಡಲು ಎಲ್ಲರೂ ಶ್ರಮಿಸಬೇಕು ಎಂದರು.