ಹಾಸನ:ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ ಎಂಬುವರು ಮೃತರಾದವರು.
ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತ ಭಕ್ತ.. ಹೃದಯಾಘಾತದಿಂದ ಸಾವು - ಭಕ್ತ ಹೃದಯಾಘಾತದಿಂದ ಸಾವು
ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
![ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತ ಭಕ್ತ.. ಹೃದಯಾಘಾತದಿಂದ ಸಾವು devotee-died-by-heart-attack-near-hassanamba-temple](https://etvbharatimages.akamaized.net/etvbharat/prod-images/768-512-16699465-thumbnail-3x2-news.jpg)
ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತ ಭಕ್ತ ಹೃದಯಾಘಾತದಿಂದ ಸಾವು
ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತವಾಗಿದೆ. ಗಿರೀಶ್ ಸ್ಥಳದಲ್ಲೇ ಮೃತರಾಗಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಹಾಸನದ ಪೆನ್ಸನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಬನವಾಸಿ ಬಳಿ ಮಾರಕಾಸ್ತ್ರ ತೋರಿಸಿ ದರೋಡೆ: 50 ಲಕ್ಷ ರೂ ಎಗರಿಸಿದ ಖದೀಮರು