ಹಾಸನ: ನಗರದ ಡೆಸ್ಟಿನಿ ರೈಡರ್ಸ್ ಯುವ ಸಂಘಟನೆ ಮತ್ತು ಗೀವ್ ಟು ಲೈಫ್ ಸಂಸ್ಥೆಯು ಕೂಲಿ ಕಾರ್ಮಿಕರಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಿತು.
ಹಾಸನದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಕೂಲಿ ಕಾರ್ಮಿಕರಿಗೆ ಅಗತ್ಯ ವಸ್ತುಗಳ ವಿತರಣೆ - ವಿವಿಧ ಸಂಘ ,ಸಂಸ್ಥೆಗಳಿಂದ ಕೂಲಿ ಕಾರ್ಮಿಕರಿಗೆ ಅಗತ್ಯ ವಸ್ತುಗಳ ವಿತರಣೆ
ಹಾಸನ ನಗರದಲ್ಲಿ ಲಾಕ್ ಡೌನ್ ಹಿನ್ನೆಲೆ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕೂಲಿ ಕಾರ್ಮಿಕರಿಗೆ ವಿವಿಧ ಸಂಘ, ಸಂಸ್ಥೆಗಳ ಸದಸ್ಯರು ಅಗತ್ಯ ವಸ್ತುಗಳನ್ನು ವಿತರಿಸಿದರು.
ಕೂಲಿ ಕಾರ್ಮಿಕರಿಗೆ ಅಗತ್ಯ ವಸ್ತುಗಳ ವಿತರಣೆ
ಲಾಕ್ ಡೌನ್ ಹಿನ್ನೆಲೆ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೂಲಿ ಕಾರ್ಮಿಕರನ್ನು ಹುಡುಕಿ ಅವರಿಗೆ ಅಕ್ಕಿ, ಬೇಳೆ, ಎಣ್ಣೆ, ಗೋಧಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಕೇವಲ ಮನುಷ್ಯರಿಗೆ ಮಾತ್ರವಲ್ಲದೆ ಸಂಘಟನೆ ಸದಸ್ಯರು ಬೀದಿ ನಾಯಿ, ಹಸುಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ.