ಕರ್ನಾಟಕ

karnataka

ETV Bharat / state

ಅರಕಲಗೂಡಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣೆ - ಅರಕಲಗೂಡು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ಸುದ್ದಿ

ಆರ್ಯವೈಶ್ಯ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ ಸಹಕಾರ ಇಲಾಖೆಯ ವತಿಯಿಂದ 10 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂಗಳ ಪ್ರೋತ್ಸಾಹ ಧನ ಚೆಕ್ ವಿತರಿಸಿ ಸನ್ಮಾನಿಸಲಾಯಿತು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣೆ
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣೆ

By

Published : Jul 7, 2020, 12:15 PM IST

ಅರಕಲಗೂಡು: ಆರ್ಯವೈಶ್ಯ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ ಸಹಕಾರ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಚೆಕ್ ನೀಡಲಾಯಿತು.

ಶರವೇಗದಲ್ಲಿ ಸಮುದಾಯಕ್ಕೆ ಹಬ್ಬುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಡೆಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು,. ಮುಖ್ಯವಾಗಿ ಕೊರೊನಾ ವಾರಿಯರ್ಸ್ ಮತ್ತಷ್ಟು ಜಾಗೃತರಾಗಬೇಕು ಎಂದು ಆರ್ಯವೈಶ್ಯ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ.ಎಸ್. ಸುಬ್ರಹ್ಮಣ್ಯ ಮನವಿ ಮಾಡಿದರು.

ಮುಖಂಡ ಕೆ. ಅಮರ್ ನಾಥ್ ಶೆಟ್ಟಿ ಮಾತನಾಡಿ, ಕೋವಿಡ್ - 19 ಯೋಧರಾಗಿ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಕೊರೊನಾ ಸೇನಾನಿಗಳು ಹೊರಗಿನಿಂದ ಬರುವವರ ಬಗ್ಗೆಯೂ ಸದಾ ನಿಗಾ ಇಡಬೇಕು. ಇದಕ್ಕೆ ಸಾರ್ವಜನಿಕರೂ ಹೆಚ್ಚು ಸಹಕಾರ ನೀಡಬೇಕು, ಇದರಿಂದ ಸೋಂಕು ತಕ್ಕಮಟ್ಟಿಗೆ ಹಳ್ಳಿಗಳಿಗೆ ವ್ಯಾಪಿಸುವುದನ್ನು ತಡೆಯಲು ನೆರವಾಗಲಿದೆ ಎಂದರು.

ಈ ಸಂದರ್ಭದಲ್ಲಿ 10 ಕ್ಕೂ ಹೆಚ್ಚು ಆಶಾಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂಗಳ ಪ್ರೋತ್ಸಾಹ ಧನ ಚೆಕ್ ವಿತರಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆರ್ಯವೈಶ್ಯ ಕೋ ಆಪರೇಟಿವ್ ಸೊಸೈಟಿ ಕಾರ್ಯದರ್ಶಿ ಎಸ್. ಬಾಲಸುಬ್ರಹ್ಮಣ್ಯಂ, ಅಧ್ಯಕ್ಷ ಬಿ.ಎಸ್. ಸುಬ್ರಹ್ಮಣ್ಯ, ಉಪಾಧ್ಯಕ್ಷ ಮಂಜುನಾಥ್, ನಿರ್ದೇಶಕರುಗಳಾದ ತುಳಸೀರಾಮ್, ಸುಬ್ರಹಣ್ಯಶೆಟ್ಟಿ, ಸತೀಶ್, ಶೋಭ, ಶರ್ಮಿಳಾ, ಮಂಜುನಾಥ್, ಉದಯ ಕುಮಾರ್, ರಂಗನಾಥ್, ಶ್ರೀನಿವಾಸಮೂರ್ತಿ, ನೂತನ್​​ ಕುಮಾರ್, ರವಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ABOUT THE AUTHOR

...view details