ಕರ್ನಾಟಕ

karnataka

ETV Bharat / state

ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ.. ನೌಕರರಿಗೆ ಬಿಸಿ ಮುಟ್ಟಿಸಿದ ಡಿಸಿ - ಸಿಬ್ಬಂದಿಗಳಿಗೆ ನೋಟಿಸ್

ಹಾಸನ ಜಿಲ್ಲಾಧಿಕಾರಿ ಅಕ್ರಂಪಾಷ ಅವರು ಇಂದು ಬೆಳಗ್ಗೆ  ಸುಮಾರು 10 ಘಂಟೆಗೆ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ನಿಗಧಿತ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾಗದಿರುವ ಸಿಬ್ಬಂದಿಗೆ ನೋಟಿಸ್ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಹಶೀಲ್ದಾರ್ ಕಛೇರಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ

By

Published : Aug 7, 2019, 9:50 PM IST

ಹಾಸನ;ಜಿಲ್ಲಾಧಿಕಾರಿ ಅಕ್ರಂಪಾಷ ಅವರು ಇಂದು ಬೆಳಗ್ಗೆ ಸುಮಾರು 10 ಘಂಟೆಗೆ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ನಿಗಧಿತ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾಗದಿರುವ ಸಿಬ್ಬಂದಿಗೆ ನೋಟಿಸ್ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ..

ಬಾಕಿ ಇರುವ ಎಲ್ಲಾ ಕಡತಗಳನ್ನು ಸಂಪೂರ್ಣವಾಗಿ ಹಾಗೂ ತ್ವರಿತವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. ಶಿರಸ್ತೇದಾರರು ಸಿಬ್ಬಂದಿ ಟೇಬಲ್ ತಪಾಸಣೆ ನಡೆಸಬೇಕು. ಎಲ್ಲರೂ ಸಮರ್ಪಕವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಸುಲಭವಾಗಿ ಕಡತಗಳು ಸಿಗುವಂತೆ ಎಲ್ಲಾ ರೆಕಾರ್ಡ್‌ಗಳನ್ನು ಸಮರ್ಪಕವಾಗಿ ಇಟ್ಟಿರಬೇಕು. ಕಚೇರಿಯ ಸುಣ್ಣ-ಬಣ್ಣ ಹಾಗೂ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆಯೂ ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ.

ABOUT THE AUTHOR

...view details