ಕರ್ನಾಟಕ

karnataka

ETV Bharat / state

ಹಾಸನ: ಜಿಲ್ಲಾ ಯೋಜನಾ ಸಮಿತಿ ಸಭೆ ನಡೆಸಿದ ಸಚಿವ ಜೆ.ಸಿ.ಮಾಧುಸ್ವಾಮಿ - ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣ

ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ, ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಜಿಲ್ಲಾ ಯೋಜನಾ ಸಮಿತಿ ಸಭೆ ನಡೆಸಿದರು.

ಜೆ.ಸಿ. ಮಾಧುಸ್ವಾಮಿ
ಜೆ.ಸಿ. ಮಾಧುಸ್ವಾಮಿ

By

Published : Feb 25, 2020, 5:43 AM IST

ಹಾಸನ:ಯೋಜನೆ ಹಾಗೂ ಯೋಜನೇತರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕೆಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಯೋಜನೆಗಳಿಗೆ ಬಂದ ಹಣವನ್ನು ಸಮರ್ಪಕವಾಗಿ ಸಂಪೂರ್ಣವಾಗಿ ಬಳಕೆ ಮಾಡಬೇಕು. ಆ ಮೂಲಕ ಅಭಿವೃದ್ಧಿ ಯೋಜನೆಗಳು ಪರಿಣಾಮಕಾರಿ ಹಾಗೂ ಸಂಪೂರ್ಣವಾಗಿ ಅನುಷ್ಠಾನಗೊಳ್ಳಬೇಕು ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.

ಜಿಲ್ಲಾ ಯೋಜನಾ ಸಮಿತಿ ಸಭೆ

ಯೋಜನಾ ವೆಚ್ಚಗಳ ಸದ್ಭಳಕೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರಲ್ಲದೆ, ಆಯವ್ಯಯ ಜನಸಾಮಾನ್ಯರ ತೆರಿಗೆ ಹಣದ ಬಳಕೆ ಅದರಲ್ಲಿ ರೂಪಿಸಿದ ಸರ್ಕಾರಿ ಯೋಜನೆಗಳು ಫಲಪ್ರದವಾಗಬೇಕಾದರೆ ಅಧಿಕಾರಿಗಳ ಹೊಣೆಗಾರಿಕೆ ಹೆಚ್ಚಾಗಿರುತ್ತದೆ. ಯೋಜನಾ ವೆಚ್ಚಗಳಿಗಿಂತ ಯೋಜನೇತರ ವೆಚ್ಚಗಳು ಹೆಚ್ಚಾಗದಂತೆ ಗಮನಹರಿಸಿ, ಸರ್ಕಾರದ ಪ್ರತಿನಿಧಿಗಳಾಗಿ ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಅನುದಾನವನ್ನು ನ್ಯಾಯ ಸಮ್ಮತವಾಗಿ ವೆಚ್ಚ ಮಾಡಿ ಎಂದು ಹೇಳಿದರು.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಫಲಾನುಭವಿ ಆಯ್ಕೆಗೆ ಯಾವುದೇ ಮಿತಿಯಿಲ್ಲದಿರುವುದರಿಂದ ಹೆಚ್ಚಿನ ಅರ್ಹರಿಗೆ ಇದರ ಸವಲತ್ತು ತಲುಪಿಸಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ABOUT THE AUTHOR

...view details