ಹಾಸನ:ಕೆಪಿಸಿಸಿ ಅಧ್ಯಕ್ಷ ಪಟ್ಟದ ಸಮಸ್ಯೆಗೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದ್ದು, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಹಿನ್ನೆಲೆ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ : ಹಾಸನದಲ್ಲಿ ಕಾರ್ಯಕರ್ತರ ಸಂಭ್ರಮ - ಮಾಜಿ ಸಚಿವ ಡಿ.ಕೆ. ಶಿವಕುಮಾರ್
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಹಾಸನದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ರು.
![ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ : ಹಾಸನದಲ್ಲಿ ಕಾರ್ಯಕರ್ತರ ಸಂಭ್ರಮ DK Shivakumar became KPCC president](https://etvbharatimages.akamaized.net/etvbharat/prod-images/768-512-6376181-thumbnail-3x2-bin.jpg)
ಕಾಂಗ್ರೆಸ್ ಮುಖಂಡ ಹಾಗೂ ವಕೀಲರ ಸಂಘದ ಮಾಜಿ ಅಧ್ಯಕ್ಷ ದೇವರಾಜೇಗೌಡ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಿರುವುದು ಪಕ್ಷದ ಕಾರ್ಯಕರ್ತರಿಗೆ ಸಂತೋಷ ತಂದಿದೆ. ರಾಜ್ಯದಲ್ಲಿ ಸಮರ್ಥ, ಉತ್ತಮ ನಾಯಕನನ್ನು ಕೆಪಿಸಿಸಿಗೆ ಕೊಡಬೇಕೆಂಬುದು ಪಕ್ಷದ ಆಸೆಯಾಗಿತ್ತು. ಅದರಂತೆ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದು ಪಕ್ಷಕ್ಕೆ ಬಲ ಬಂದಂತಾಗಿದೆ.
ಮುಂದಿನ ದಿನಗಳಲ್ಲಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಗೆಲುವು ಪಡೆಯುವುದರ ಮೂಲಕ ಕಾಂಗ್ರೆಸ್ ಪಾರ್ಟಿಯನ್ನು ಬಲಪಡಿಸಿ ಉತ್ತಮ ಸಂಘಟನೆ ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಕೆ. ರಂಗಸ್ವಾಮಿ, ನಾಯಕರಹಳ್ಳಿ ಅಶೋಕ್, ಮಲ್ಲಿಗೆವಾಳ್ ದೇವಪ್ಪ, ಶಿವಕುಮಾರ್ ಇತರರು ಹಾಜರಿದ್ದರು.