ಹಾಸನ: ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಎನ್.ಎಸ್.ಯು.ಐ. ಅಧ್ಯಕ್ಷರಾದ ಮಂಜುನಾಥ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಕರ್ತರು ರಕ್ತದಾನ ಮಾಡಿದರು.
ಡಿಕೆಶಿ ಆದೇಶದಂತೆ ಹಾಸನದಲ್ಲಿ ಕೈ ಕಾರ್ಯಕರ್ತರಿಂದ ರಕ್ತದಾನ! - ಎನ್.ಎಸ್.ಯು.ಐ. ಅಧ್ಯಕ್ಷರಾದ ಮಂಜುನಾಥ್
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಎನ್.ಎಸ್.ಯು.ಐ. ಅಧ್ಯಕ್ಷರಾದ ಮಂಜುನಾಥ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಕರ್ತರು ರಕ್ತದಾನ ಮಾಡಿದರು.
ನಂತರ ಮಾತನಾಡಿದ ವಿಧಾನ ಪರಿಷತ್ತು ಸದಸ್ಯ ಗೋಪಾಲಸ್ವಾಮಿ, ಇಂದು ಕೊರೊನಾ ಎಂಬ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರಗೆ ಬಾರದೇ ಇಂದು ರಕ್ತದ ಕೊರತೆ ಹೆಚ್ಚು ಇರುವುದರಿಂದ ಇಂತಹ ರಕ್ತದಾನ ಶಿಬಿರವನ್ನು ಎನ್.ಎಸ್.ಯು.ಐ. ನಿಂದ ಏರ್ಪಡಿಸಲಾಗಿದೆ ಎಂದರು. ಹೆಚ್ಚು ಹೆಚ್ಚು ಜನ ರಕ್ತದಾನ ಮಾಡಲು ಮುಂದಾಗಿ ಮತ್ತೊಬ್ಬರ ಪ್ರಾಣ ಉಳಿಸಬೇಕು. ಇಂತಹ ಶಿಬಿರಗಳು ಆಗಾಗ್ಗೆ ನಡೆಯುತ್ತಿರಲಿ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಮುಖಂಡರಾದ ಹೆಚ್.ಕೆ. ಮಹೇಶ್, ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ರಂಜಿತ್, ಕುಮಾರಸ್ವಾಮಿ, ರಘು, ಶಿವಕುಮಾರ್ ಇತರರು ಪಾಲ್ಗೊಂಡಿದ್ದರು.