ಹಾಸನ (ಅರಸೀಕೆರೆ): ಕಲುಷಿತ ನೀರು ಸೇವಿಸಿ 35ಕ್ಕೂ ಅಧಿಕ ಜನರು ತೀವ್ರ ಅಸ್ವಸ್ಥವಾಗಿರುವ ಘಟನೆ ಅರಸೀಕೆರೆ ತಾಲೂಕಿನ ಬಂದೂರು ಬೋವಿ ಕಾಲೋನಿಯಲ್ಲಿ ನಡೆದಿದೆ.
ಕಲುಷಿತ ನೀರು ಸೇವನೆ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಕಲುಷಿತ ನೀರು ಸೇವಿಸಿದ ಅರಸೀಕೆರೆ ತಾಲೂಕಿನ ಬಂದೂರು ಬೋವಿ ಕಾಲೋನಿಯ 35ಕ್ಕೂ ಅಧಿಕ ಜನರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೋವಿ ಕಾಲೋನಿ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಇಲ್ಲದಿರುವುದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈಚೆಗೆ ಕುಡಿಯುವ ನೀರು ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಯಾವ ಅಧಿಕಾರಿಗಳು ಸ್ಪಂದಿಸದ ಕಾರಣ ಇಂದು ಕಾನೋನಿ ನಿವಾಸಿಗರು ಸಂಕಷ್ಟ ಎದುರಿಸುವಂತಾಗಿದೆ. ಕಾಲೋನಿ ಜನರು ಅನಿವಾರ್ಯವಾಗಿ ಕಲುಷಿತ ನೀರನ್ನೇ ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುಸ್ಥಿತಿಗೆ ಕಾರಣ ಎಂದು ಗ್ರಾಮಸ್ಥರು ಗಳ ಆರೋಪಿಸಿದರು.
ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ನಂತರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಲಾಯಿತು. ತುರ್ತು ವಾಹನದ ಮೂಲಕ ಎಲ್ಲರನ್ನೂ ಅರಸೀಕೆರೆಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಯಿತು.